Advertisement

ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಸಚಿವ ಪ್ರಮೋದ್‌ 

07:45 AM Aug 13, 2017 | Team Udayavani |

ಬ್ರಹ್ಮಾವರ: ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹರಿಸುವ ದೃಷ್ಟಿಯಿಂದ ವಿನೂತನ ಗ್ರಾಮ ಮಟ್ಟದ ಜನಸಂಪರ್ಕ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಶುಕ್ರವಾರ ಮಟಪಾಡಿ ಚಪ್ಟೆಗಾರ್‌ ಸಭಾಭವನದಲ್ಲಿ ಮಟಪಾಡಿ ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು. ಹಿಂದೆ ಜನಸಂಪರ್ಕ ಸಭೆ ಮುಗಿದ ಮೇಲೆ ಗ್ರಾಮಸ್ಥರಿಗೆ ವಿಚಾರ ತಿಳಿಯುತ್ತಿತ್ತು. ಆದರೆ ತಾನು ಪ್ರತಿ ಮನೆಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಿ, ಎಲ್ಲ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಯಿಸಿ ಜನಸಂಪರ್ಕ ಸಭೆ ಆಯೋಜಿ ಸುತ್ತಿರುವುದಾಗಿ ಹೇಳಿದರು.

ಅಭಿವೃದ್ಧಿಯ ಸಂಕೇತ
ಜನಸಂಪರ್ಕ ಸಭೆಗಳಿಗೆ ಕಡಿಮೆ ಜನ ಸೇರಿದ್ದಾರೆ ಎಂದರೆ ಆ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ, ಜನರ ಬೇಡಿಕೆಗಳು ಕಡಿಮೆ ಇರುವುದನ್ನು ಸೂಚಿಸುತ್ತದೆ ಎಂದು ಪ್ರಮೋದ್‌ ಮಧ್ವರಾಜ್‌ ಹೇಳಿದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಸದಸ್ಯ ಸುಧೀರ್‌ ಕುಮಾರ್‌ ಶೆಟ್ಟಿ, ಹಂದಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರತಿಮಾ ಶೆಟ್ಟಿ, ವಿಶೇಷ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ರಾಜ್‌, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ವಂದನಾ ಸ್ವಾಗತಿಸಿ, ತಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಪ್ರಸ್ತಾವನೆಗೈದರು. ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next