ಟರ್ಕಿ : ಇಸ್ತಾಂಬುಲ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇದುವರೆಗೂ ಆರು ಮಂದಿ ಸಾವನ್ನಪ್ಪಿದ್ದು, ಎಂಬತ್ತೊಂದು ಮಂದಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಟರ್ಕಿಯ ಉಪಾಧ್ಯಕ್ಷ ಫುಟ್ ಒಕ್ಟೆ ಮಾತನಾಡಿ ಇದೊಂದು ಭಯೋತ್ಪಾದನಾ ಕೃತ್ಯ ಎಂದು ಹೇಳಿದ್ದಾರೆ.
ಬಾಂಬ್ ಸ್ಫೋಟದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ಮಾಹಿತಿ ನೀಡಿದ್ದಾರೆ.
ಇಸ್ತಾಂಬುಲ್‌ನ ಇಸ್ತಿಕ್‌ಲಾಲ್ ಸ್ಟ್ರೀಟ್‌ನಲ್ಲಿ ಬಾಂಬ್ ಇಟ್ಟಿದ್ದರು ಎಂದು ಹೇಳಲಾಗಿದ್ದು ಈ ಘಟನೆಯಲ್ಲಿ ಇದುವರೆಗೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೆ, 81 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇಸ್ತಾಂಬುಲ್‌ನಲ್ಲಿ ಭಾನುವಾರ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಈ ಘಟನೆ ಹಿಂದೆ ಭಯೋತ್ಪಾದಕರ ಕೈವಾಡವಿದೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಶಂಕಿಸಿದ್ದಾರೆ.
ಇದನ್ನೂ ಓದಿ : ಶಾಲೆಗಳಿಗೆ ಕೇಸರಿ ಬಣ್ಣ ವಿಚಾರ: ಎಲ್ಲದರಲ್ಲೂ ರಾಜಕಾರಣ ಸಲ್ಲದು ಎಂದ ಸಿಎಂ ಬೊಮ್ಮಾಯಿ