Advertisement

ವ್ಯವಹಾರಕ್ಕೆ ಸಂಬಂಧಿಸಿ ಐಟಿ ದಾಳಿ,ಕಾಂಗ್ರೆಸ್‌ನದ್ದು ಆಧಾರ ರಹಿತ ಆರೋಪ

11:53 AM Aug 03, 2017 | Team Udayavani |

ಬೆಂಗಳೂರು : ‘ಸಚಿವ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ದಾಳಿ ನಡೆದಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಇಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಡಿ.ಕೆ ಶಿವಕುಮಾರ್‌ ಅವರು ಆಗರ್ಭ ಶ್ರೀಮಂತರಿದ್ದಾರೆ. ಹಲವು ಉದ್ದಿಮೆಗಳನ್ನು ಹೊಂದಿದ್ದಾರೆ. ಹೀಗಾಗಿ ಐಟಿ ದಾಳಿ ನಡೆದಿದೆ’ ಎಂದರು. 

‘ಈ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಸ್ಪಷ್ಟನೆ ನೀಡಿದ್ದಾರೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next