Advertisement

ಕಾಂಗ್ರೆಸ್‌ ಅಭ್ಯರ್ಥಿ ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ 

09:47 AM Apr 29, 2018 | Team Udayavani |

ನಾಗಮಂಗಲ: ಜೆಡಿಎಸ್‌ನಲ್ಲಿ ಬಂಡೆದ್ದು ಕಾಂಗ್ರೆಸ್‌ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಭಾನುವಾರ ಐಟಿ ದಾಳಿ  ನಡೆದಿರುವ ಬಗ್ಗೆ ವರದಿಯಾಗಿದೆ. 

Advertisement

ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ. 

ಇನ್ನಿಬ್ಬರು ಸಂಬಂಧಿಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next