Advertisement

ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ

10:05 AM Oct 11, 2019 | Team Udayavani |

ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ಮಾಲೀಕತ್ವದ ಸಿದ್ಧಾರ್ಥ ವಿದ್ಯಾಸಂಸ್ಥೆಯಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿ ರಾಜಕೀಯ ಪ್ರೇರಿತವಲ್ಲ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳುವ ಮೂಲಕ ಕಾಂಗ್ರೆಸ್​ ನಾಯಕರಿಗೆ ಮುಜುಗರವನ್ನುಂಟು ಮಾಡಿದ್ದಾರೆ.

Advertisement

ತಾಲೂಕಿನ ಹರಗಿನಡೋಣಿ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣದ ಸ್ಥಳ ಪರಿಶೀಲನೆ‌ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳ ದಾಳಿಯನ್ನು ನಾನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಎಂದರು.

ಕಾಂಗ್ರೆಸ್ಸಿನ ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಸಮರ್ಥರಿದ್ದಾರೆ, ಅದನ್ನು ನಿಭಾಯಿಸುವ ಶಕ್ತಿ ಅವರಲ್ಲಿದೆ ಎಂದರು.

ನಾನು ಬಿಜೆಪಿ ಸೇರುವ ವಿಚಾರ ಊಹೆಯಾಗಿರಲಿ:
ಕಳೆದ ಕೆಲ ತಿಂಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದೆ, ಹಾಗಾಗಿ ಕ್ಷೇತ್ರದಲ್ಲಿ ಇರಲಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎಂಬ ಊಹಾಪೋಹ ಸುದ್ದಿಯನ್ನು ಯಾರೋ ಹಬ್ಬಿಸಿದ್ದಾರೆ. ಅದು ಊಹೆಯಾಗಿರಲಿ ಎಂದು ಶಾಸಕ ನಾಗೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು. ನಾನು ಕ್ಷೇತ್ರದಲ್ಲಿ ಇಂದಿನಿಂದ ಪ್ರವಾಸ ಆರಂಭಿಸಿದ್ದೇನೆ. ಇಲ್ಲಿಯೇ ಇದ್ದು ಮತದಾರರ ಸಮಸ್ಯೆಗಳನ್ನು ಆಲಿಸುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next