Advertisement
ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನಿಂದ ಹೊರಹೋಗುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. 20ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಶಾಸಕರ ಕೊಠಡಿಗಳಲ್ಲಿಯೂ ಪರಿಶೀಲನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ರೆಸಾರ್ಟ್‌ನಲ್ಲಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ಬಿಗಿ ಭದ್ರತೆಯೊಂದಿಗೆ ಬೆಂಗಳೂರಿಗೆ ಕರೆತರುತ್ತಿರುವ ಬಗ್ಗೆ ವರದಿಯಾಗಿದೆ.
Related Articles
ಡಿ.ಕೆ.ಶಿವಕುಮಾರ್ ಅವರ ದೆಹಲಿಯ ಸಫ್ದರ್ ಜಂಗ್‌ನಲ್ಲಿರುವ ನಿವಾಸದ ಮೇಲೂ ದಾಳಿ ನಡೆಸಲಾಗಿದ್ದು, 5 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಡಿ.ಕೆ.ಶಿವಕುಮಾರ್ ಅವರ ವಿವಿಧ ಕಚೇರಿಗಳ ಮೇಲೂ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ.
Advertisement
ಕಾಂಗ್ರೆಸ್ ಕೆಂಡಾಮಂಡಲ ಐಟಿ ದಾಳಿ ಕೇಂದ್ರ ಸರ್ಕಾರದ ಹತಾಶೆಯ ಕ್ರಮ ಎಂದು ರಾಜ್ಯಸಭಾ ಅಭ್ಯರ್ಥಿ ಅಹಮದ್ ಪಟೇಲ್ ಕಿಡಿ ಕಾರಿದ್ದಾರೆ. ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಹಿಂದೆಂದೂ ಮಾಡದಂತಹ ತಂತ್ರಗಳನ್ನು ಬಿಜೆಪಿ ಈಗ ಮಾಡುತ್ತಿದೆ. ಒಂದೂ ಸ್ಥಾನಕ್ಕಾಗಿ ಏನು ಬೇಕಾದರು ಬಿಜೆಪಿ ಮಾಡುತ್ತದೆ ಎಂದು ಆರೋಪಿಸಿದ್ದಾರೆ. ಹೋರಾಟ ಮಾಡಿ
ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ನಡೆದ ಬಳಿಕ ಸಿಟ್ಟಿಗೆದ್ದಿರುವ ಕಾಂಗ್ರೆಸ್ ಪಕ್ಷ ಕೇಂದ್ರದ ವಿರುದ್ಧ ಹೋರಾಟ ನಡೆಸಲು ಅಣಿಯಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಐಟಿ ದಾಳಿ ವಿರುದ್ಧ ನೀವು ಹೋರಾಟ ಮಾಡಿ ಎಂದಿರುವುದಾಗಿ ವರದಿಯಾಗಿದೆ. ಲೋಕಸಭೆಯಲ್ಲಿ ವಿಷಯ ಪ್ರಸ್ತಾಪ
ಐಟಿ ದಾಳಿ ವಿಚಾರವನ್ನು ಲೋಕಸಭಾ ಕಲಾಪದಲ್ಲಿ ಪ್ರಸ್ತಾವಿಸಲು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸಭೆಯಲ್ಲೂ ಈ ವಿಚಾರವಾಗಿ ಕಾವೇರಿದ ಚರ್ಚೆ ನಡೆದಿದೆ. ಐಟಿ ದಾಳಿಗೂ ಶಾಸಕರಿಗೂ ಸಂಬಂಧ ಇಲ್ಲ
ಇಂದು ನಡೆಸಿರುವ ದಾಳಿಗೂ ಗುಜರಾತ್ ಕಾಂಗ್ರೆಸ್ ಶಾಸಕರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಬಿಡಿಟಿ ಅಧ್ಯಕ್ಷ ಸುಶೀಲ್ ಚಂದ್ರ ಸ್ಪಷ್ಟನೆ ನೀಡಿದ್ದಾರೆ.ಡಿ.ಕೆ.ಶಿವಕುಮಾರ್ ಅವರ ವಿರುದ್ಧ ನಡೆಸುತ್ತಿರುವ ಐಟಿ ತನಿಖೆಯ ಭಾಗವಾಗಿ ಪೂರ್ವ ಯೋಜನೆಯಂತೆ ದಾಳಿ ನಡೆಸಿದ್ದೇವೆ ಎಂದಿದ್ದಾರೆ. ರಾಜ್ಯ ಸಭಾ ಚುನಾವಣೆಯಲ್ಲಿ ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ರನ್ನು ಗೆಲ್ಲಿಸುವ ಸಲುವಾಗಿ ಗುಜರಾತ್‌ನ 40 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲ ಭೀತಿಯಲ್ಲಿ ರೆಸಾರ್ಟ್‌ಗೆ ಕರೆಸಿಕೊಳ್ಳಲಾಗಿದೆ.ಶಾಸಕರ ಉಸ್ತುವಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.