Advertisement

ಜಿಲ್ಲಾ ಮಟ್ಟದಲ್ಲಿ ಹಿಂದುಳಿದ ವರ್ಗದವರ ಸಮಾವೇಶ

09:51 PM Dec 19, 2022 | Team Udayavani |

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಈಗ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಸಜ್ಜಾಗಿದೆ.

Advertisement

ಜ.15ರಿಂದ ಫೆ.15ರ ವರೆಗೆ ರಾಜ್ಯವ್ಯಾಪಿಯಾಗಿ ಜಿಲ್ಲಾಮಟ್ಟದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಕೈಗೆ ಮತ್ತಷ್ಟು ಬಲ ತುಂಬಲು ಮುಂದಾಗಿದೆ.

ಜತೆಗೆ ಈ ಜಿಲ್ಲಾ ಸಮಾವೇಶಗಳು ಮುಗಿದ ಬಳಿಕ ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗದವರ ಬೃಹತ್‌ ಸಮಾವೇಶ ಆಯೋಜಿಸಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಿದೆ.

ಸುಮಾರು 8ರಿಂದ 10 ಲಕ್ಷ ಜನರನ್ನು ಸಮಾವೇಶಕ್ಕೆ ಕರೆತರುವ ನಿಟ್ಟಿನಲ್ಲಿ ಕೂಡ ಸಿದ್ಧತೆ ನಡೆಸಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಹಿಂದುಳಿದ ವರ್ಗದವರ ಬೃಹತ್‌ ಸಮಾವೇಶ ಆಯೋಜನೆ ಮಾಡಿ ಶಕ್ತಿ ಪ್ರದರ್ಶನಕ್ಕೆ ನಿರ್ಧರಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ರಾಜ್ಯದಲ್ಲಿ ಶೇ.55ರಷ್ಟು ಮಂದಿ ಹಿಂದುಳಿದ ವರ್ಗದವರಿದ್ದಾರೆ. ಅವರು ಹಿಂದಿನಿಂದಲೂ ಕಾಂಗ್ರೆಸ್‌ ಅನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್‌ ಬಿಟ್ಟು ಹೋಗಿರುವ ಒಬಿಸಿ ಮತದಾರರನ್ನು ಒಂದಾಗಿ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಹಿಂದುಳಿದ ವರ್ಗದವರ ಸಮಾವೇಶ ಹಮ್ಮಿಕೊಳ್ಳಲಾಗಿದೆ ತೀರ್ಮಾನಿಸಲಾಗಿದೆ ಎಂದರು.

Advertisement

ರಾಹುಲ್‌ ಗಾಂಧಿ ಉಪಸ್ಥಿತಿ
ಹಿರಿಯ ಮುಖಂಡ ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ. ಫೆಬ್ರವರಿ ತಿಂಗಳ ಅಂತ್ಯದಲ್ಲಿ ಇಲ್ಲವೆ ಮಾರ್ಚ್‌ ಮೊದಲ ವಾರದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದ ಜಿಲ್ಲಾವಾರು ಘಟಕದ ಪದಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್‌ ವಕ್ತಾರ ರಮೇಶ್‌ ಬಾಬು ಮುಂತಾದವರು ಉಪಸ್ಥಿತರಿದ್ದರು.

ಕೆಪಿಸಿಸಿ ಚುನಾವಣ ಸಮಿತಿಗೆ ಸೇರ್ಪಡೆ: ಸಿದ್ದು ಆಪ್ತರಿಗೆ ಮಣೆ?
ಬೆಂಗಳೂರು: ಕೆಪಿಸಿಸಿ ಚುನಾವಣ ಸಮಿತಿಗೆ ಮತ್ತೆ 11 ಮಂದಿ ಪ್ರಮುಖರ ಹೆಸರುಗಳನ್ನು ಸೇರಿಸಲಾಗಿದೆ. ಈ ಹಿಂದೆ 36 ಸದಸ್ಯರನ್ನಷ್ಟೇ ನೇಮಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಆಪ್ತರಿಗಷ್ಟೇ ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರನ್ನು ದೂರ ಇರಿಸಲಾಗಿದೆ ಎಂದು ಮಾತು ಕೇಳಿ ಬಂದು ಅಸಮಾಧಾನ ಉಂಟಾಗಿತ್ತು. ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದ್ದು, ಈಗ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಜಮೀರ್‌ ಅಹ್ಮದ್‌ ಖಾನ್‌, ಮಾಜಿ ಶಾಸಕಿ ಉಮಾಶ್ರೀ, ಬಿ.ಎಲ್‌ ಶಂಕರ್‌, ಮಾಜಿ ಸಚಿವರಾದ ಪರಮೇಶ್ವರ್‌ ನಾಯ್ಕ…, ರಮಾನಾಥ ರೈ, ಎಚ್‌.ಎಂ.ರೇವಣ್ಣ, ಎ.ಎಚ್‌ ಹಿಂಡಸಗೇರಿ , ಶಿವಾನಂದ ಪಾಟೀಲ್‌, ಶರಣಬಸಪ್ಪ ಗೌಡ ದರ್ಶನಾಪುರ, ಶರಣ್‌ ಪ್ರಕಾಶ್‌ ಪಾಟೀಲ್‌ ಹೆಸರನ್ನು ಸೇರ್ಪಡೆ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next