Advertisement
ಡಿ.ಕೆ. ಶಿವಕುಮಾರ್ ಮಾತ್ರವಲ್ಲದೇ, ಪತ್ನಿ ಹಾಗೂ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಐಟಿ ಅಧಿಕಾರಿಗಳು, ವಿಚಾರಣೆ ಪ್ರಕ್ರಿಯೆ ಮುಗಿಯುವವರೆಗೂ ಯಾವುದೇ ವಹಿವಾಟು ನಡೆಸದಂತೆ ನಿರ್ದೆಶನ ನೀಡಿದ್ದಾರೆ ಎಂದು ಹೇಳಲಾಗಿದೆ.
ನಡೆಯುತ್ತದೆ ಎಂದು ಐಟಿ ಮೂಲಗಳು ತಿಳಿಸಿವೆ. ಬ್ಯಾಂಕ್‌ಗಳಿಗೂ ನೋಟಿಸ್: ಡಿ.ಕೆ. ಶಿವಕುಮಾರ್ ಅವರು ಹೂಡಿಕೆ ಮಾಡಿರುವ ಕೆಲ ಖಾಸಗಿ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಬ್ಯಾಂಕ್ ಖಾತೆಗಳ ವಿವರಣೆ ಪಡೆದುಕೊಳ್ಳಲಾಗಿದೆ. ದಾಳಿ ನಡೆದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರು. ವಹಿವಾಟಿನ ಕುರಿತು ಮಾಹಿತಿ ಕೇಳಲಾಗಿದೆ. ದಾಳಿ ವೇಳೆ 300ಕ್ಕೂ ಹೆಚ್ಚು ಖಾತೆಗಳನ್ನು ಹೊಂದಿರುವ ಮಾಹಿತಿ ಇತ್ತು. ಬ್ಯಾಂಕ್‌ಗಳು
ಸಹ ದಾಳಿಗೊಳಗಾದವರ ಖಾತೆಗಳ ವಿವರದ ಕುರಿತು ಕೆಲವು ಮಾಹಿತಿ ನೀಡಿವೆ ಎಂದು ಮೂಲಗಳು ತಿಳಿಸಿವೆ.