Advertisement
“ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್‌ಐ ಸಂಘಟನೆ ನನ್ನಿಂದಲೇ ಬೆಳೆದಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಸಾವಿರ ಸುಳ್ಳುಗಳನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ಸುಳ್ಳು ಉದುರಿಸಿಕೊಳ್ಳುತ್ತಾ ತಿರುಗುತ್ತಿದ್ದಾರೆ ಎಂದು ಹೇಳಿದ್ದಾರೆ.
Related Articles
Advertisement
ಹಿಂಪಡೆಯಲಾದ ಮೊಕದ್ದಮೆಗಳ ಪಟ್ಟಿಯನ್ನೂ ಮಾಜಿ ಸಿಎಂ ಬಿಡುಗಡೆ ಮಾಡಿ, ಹಿಂದಕ್ಕೆ ಪಡೆಯಲಾದ ಈ ಪ್ರಕರಣಗಳಲ್ಲಿ ಪಿಎಸ್‌ಐ ಕಾರ್ಯಕರ್ತರು ಆರೋಪಿಗಳಾಗಿದ್ದರು ಎನ್ನುವುದರ ಬಗ್ಗೆ ಬಿಜೆಪಿ ಸರ್ಕಾರ ಕೊಟ್ಟ ಉತ್ತರದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ಹೀಗಾಗಿ ಬಿಜೆಪಿ ಮತ್ತು ಪರಿವಾರದ ಮಂದಿ ಸಾರ್ವಜನಿಕವಾಗಿ ಸುಳ್ಳನ್ನೇ ಆರಾಧಿಸುತ್ತಾ, ಸುಳ್ಳನ್ನೇ ಭಜಿಸುತ್ತಾ, ಸುಳ್ಳನ್ನೇ ತೀರ್ಥ ಪ್ರಸಾದದಂತೆ ಹಂಚುತ್ತಾ ತಿರುಗುವುದನ್ನು ನಿಲ್ಲಿಸಬೇಕು. ಯಾವ ಪಿಎಫ್‌ಐ ಕಾರ್ಯಕರ್ತರ ಮೇಲಿನ ಯಾವ ಪ್ರಕರಣವನ್ನು ಕಾಂಗ್ರೆಸ್ ಅವಧಿಯಲ್ಲಿ ಹಿಂದಕ್ಕೆ ಪಡೆಯಲಾಗಿತ್ತು ಎನ್ನುವುದನ್ನು ಬಿಜೆಪಿ ಹೇಳಬೇಕು ಎಂದು ಸವಾಲೆಸೆದಿದ್ದಾರೆ.
ಸಂಘ ಪರಿವಾರದ ಅಂಗಳದಲ್ಲೇ ಇರುವ ಪ್ರಮೋದ್ ಮುತಾಲಿಕ್ ಅವರೇ ಕೆಲವು ದಿನಗಳ ಹಿಂದಷ್ಟೇ, “ಪಿಎಫ್‌ಐ ಮತ್ತು ಎಸ್‌ಡಿಪಿಐ ಎರಡಕ್ಕೂ ಬಿಜೆಪಿಯೇ ಪೋಷಕ. ಬಿಜೆಪಿಯಿಂದಲೇ ಈ ಎರಡೂ ಬೆಳೆದಿವೆ” ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಇದುವರೆಗೂ ಬಿಜೆಪಿಯವರಾಗಲೀ, ಸಂಘ ಪರಿವಾರವಾಗಲೀ ಅಲ್ಲಗಳೆದಿಲ್ಲ ಏಕೆ? ಹಾಗಾದರೆ ಪ್ರಮೋದ್ ಮುತಾಲಿಕ್ ಅವರ ಮಾತು ನಿಜ ತಾನೆ?ಹಾಗೆಯೇ ಸಂಘ ಪರಿವಾರದ ಅಂಗಳದಲ್ಲೇ ಇರುವ ಸತ್ಯಜಿತ್ ಸುರತ್ಕಲ್ ಅವರು, ಪಿಎಫ್‌ಐ ಮತ್ತು ಎಸ್‌ಡಿಪಿಐ ಎರಡೂ ಬಿಜೆಪಿಯ ಬಿ ಟೀಮ್ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಬಿಜೆಪಿ ಮತ್ತು ಸಂಘ ಪರಿವಾರ ಅಲ್ಲಗಳೆದಿಲ್ಲ ಎಂದು ಹೇಳಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಚಟುವಟಿಕೆಗಳಿಂದ ಅತ್ಯಂತ ಹೆಚ್ಚು ರಾಜಕೀಯ ಲಾಭ ಮಾಡಿಕೊಳ್ಳುತ್ತಿರುವುದು ಬಿಜೆಪಿಯೇ ಎನ್ನುವುದು ಇಡಿ ರಾಜ್ಯದ ಜನತೆಗೆ ಗೊತ್ತಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತರು, ಕಾರ್ಮಿಕರು, ದಲಿತರು, ಪೌರ ಕಾರ್ಮಿಕರು, ಕಬ್ಬು ಬೆಳೆಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದೇ ಹೆಚ್ಚು. ಕೆಲವೊಂದು ಪ್ರಕರಣಗಳಲ್ಲಿ ಆರೋಪಿಗಳು ಮುಸ್ಲಿಮರಾಗಿದ್ದಾರೆ. ಅವರೆಲ್ಲರನ್ನೂ ಪಿಎಫ್‌ಐ ಎಂದು ಬಿಂಬಿಸಿ ತಮ್ಮ ಸುಳ್ಳಿನ ಭಜನೆ ಮಾಡಿದರೆ ಜನ ನಂಬುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.