Advertisement

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

02:32 PM Nov 06, 2024 | Team Udayavani |

ಹುಬ್ಬಳ್ಳಿ: ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹ್ಮದ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.

Advertisement

ನ.6ರ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದ ಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25‌ ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧ‌ಂಗೆ, ಗಲಭೆ ನಡೆಯುತ್ತಿವೆ. ಈ ಕಾರಣ ಈತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಇಡೀ ದೇಶದಲ್ಲಿ ರೈತರ ಭೂಮಿಗಳು,‌ ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್‌ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್ ರೀತಿ ಹರಡುತ್ತಿದೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಕೆಲ‌ ಮುಸ್ಲಿಂ ಜಿಲ್ಲಾಧಿಕಾರಿ, ತಹಶಿಲ್ದಾರ, ನೋಂದಣಾಧಿಕಾರಿ, ಪಿಡಿಒಗಳು ತಾವು ಸಲ್ಲಿಸುತ್ತಿರುವ ಪ್ರದೇಶಗಳಲ್ಲಿ ವಕ್ಫ್ ಬೋರ್ಡ್ ಹೆಸರಲ್ಲಿ ಆಸ್ತಿ ಕಬಳಿಸುವ ಹುನ್ನಾರ ನಡೆದಿದ್ದು, ಈ ಕುರಿತು ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 32 ಸಾವಿರಕ್ಕೂ ಅಧಿಕ ಮಠ-ಮಂದಿರಗಳಿವೆ.‌ ದೇಶವೇ ಇಂದು ಅಸುರಕ್ಷತೆಯ ಸಂಕಷ್ಟದಲ್ಲಿದ್ದು, ಎಲ್ಲಾ ಮಠಾಧೀಶರು ಪ್ರವಚನಕ್ಕೆ ಮಾತ್ರ ಸೀಮಿತರಾಗದೆ ದೇಶ ಮತ್ತು ಧರ್ಮ ರಕ್ಷಣೆಗಾಗಿ ಬೀದಿಗಿಳಿದು ಹೋರಾಟ ಮಾಡಬೇಕು.‌ ಹಾಗೆ ಮಾಡಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದರು.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ನಿರ್ಧಾರಕ್ಕೆ ನಾವು ಸ್ವಾಗತಿಸುತ್ತೇವೆ.‌ ವಿಜಯಪುರದ ಹೊನವಾಡದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಶ್ರೀರಾಮ ಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ. ಓರ್ವ ಅಪರಾಧಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ತನಿಖೆಗೆ ಹೋದರೆ ನ್ಯಾಯಯುತ ತನಿಖೆ ನಡೆಯಲು ಹೇಗೆ ಸಾಧ್ಯ? ವಿಚಾರಣೆಗೆ ಹೋಗುವ ಮುನ್ನ ರಾಜೀನಾಮೆ ಕೊಟ್ಟು ಶ್ರೀಸಾಮಾನ್ಯರಂತೆ ಹೋಗುವ ಮೂಲಕ ತಮ್ಮ ಘನತೆ ಉಳಿಸಿಕೊಳ್ಳಬೇಕಿತ್ತು ಎಂದು ಕಿಚಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next