Advertisement
ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿರುವಾಗಲೇ ಟ್ವೀಟ್ ಮಾಡಿರುವ ಪ್ರಿಯಾಂಕಾ ವಾದ್ರಾ “ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಆಯ್ಕೆ ಹಾಗೂ ವಿವೇಚನೆಗೆ ಸಂಬಂಧಪಟ್ಟಿದ್ದು ಎಂದು ಹೇಳಿದ್ದಾರೆ.
Related Articles
Advertisement
ಪಾಕಿಸ್ಥಾನದ ಹೆಣ್ಣು ಮಕ್ಕಳ ಹಕ್ಕಿನ ಹೋರಾಟಗಾರ್ತಿ ಯೂಸೂಫ್ ಮಲಾಲಾ ಕೂಡಾ ಹಿಜಾಬ್ ವಿವಾದವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.
“ಕಾಲೇಜು ನಮ್ಮನ್ನು ಅಧ್ಯಯನ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ”. ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಬರಲು ನಿರಾಕರಿಸುವುದು ಭಯಾನಕವಾಗಿದೆ. ಮಹಿಳೆಯರ ವಿರೋಧ ಮುಂದುವರಿಯುತ್ತದೆ, ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.