Advertisement
ಇಲ್ಲಿನ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಕಾಂಗ್ರೆಸ್ ಪಕ್ಷದ ಪ್ರಜಾದನಿ ಯಾತ್ರೆಯಲ್ಲಿ ಜನರು ಸೇರುತ್ತಿಲ್ಲ. ಮತ್ತೊಂದೆಡೆ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎಂಬುದನ್ನು ಸಾಬೀತುಪಡಿಸುವಂತಿದೆ ಎಂದರು.
Related Articles
Advertisement
ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುದ್ದಿಗಾರರು ಗಮನ ಸೆಳೆದಾಗ, ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.
ರಾಜ್ಯದ ಮುಂದಿನ ಮುಖ್ಯಮಂತ್ರಿ ತಾವೇ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಲೇವಡಿ ಮಾಡಿದರು.
ಇದನ್ನೂ ಓದಿ:ಕೋವಿಡ್ ನಂತೆಯೇ ಹರಡುತ್ತದೆ ‘ಎಚ್3ಎನ್2 ವೈರಸ್’; ಮಾಸ್ಕ್- ಅಂತರ ಮತ್ತೆ ಜಾರಿ ಸಾಧ್ಯತೆ!
ಇನ್ನು, ಬಿಜೆಪಿ ಉಮೇದುವಾರರ ಮೊದಲ ಪಟ್ಟಿ ಆದಷ್ಟು ಬೇಗ ಪ್ರಕಟಗೊಳ್ಳಲಿದೆ. ತಮ್ಮ ಪುತ್ರ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಬಹುಶಃ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಸೂಚ್ಯವಾಗಿ ಸುಳಿವು ನೀಡಿದರು
ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ್, ಆಳಂದ ಶಾಸಕ ಸುಭಾಷ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ್, ಶಶಿಲ್ ಜಿ.ನಮೋಶಿ, ಸುನಿಲ್ ವಲ್ಯಾಪುರೆ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.