Advertisement

ಕನ್ನಡ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ

09:07 PM Nov 25, 2019 | Lakshmi GovindaRaj |

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಆಂಗ್ಲಭಾಷಾ ಸಾಮ್ರಾಜ್ಯ ಬೆಳೆಯುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶ್ರವಣಬೆಳಗೊಳ ಜೈನಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕರು ತಿಳಿಸಿದರು.

Advertisement

ಶ್ರೀಕ್ಷೇತ್ರದಲ್ಲಿ ಮಕ್ಕಳ ಪರಿಷತ್ತಿನ ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸದಿದ್ದರೆ ಕನ್ನಡ ಸಾಹಿತ್ಯಕ್ಕೆ ಗಂಡಾತರ ಬದಲಿದೆ. ಕನ್ನಡ ಸಾಹಿತ್ಯವನ್ನು ಮಕ್ಕಳಿಗೆ ಪರಿಚಯಿಸುವ ಕೆಲವನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಇಂಗ್ಲಿಷ್‌ ವ್ಯಾಮೋಹ ಬಿಡಿ: ಮಕ್ಕಳಿಗೆ ಕನ್ನಡ ಸಾಹಿತ್ಯದ ಬಗ್ಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಅವರಲ್ಲಿರುವ ಸೃಜನಶೀಲತೆ ಹೊರಹೊಮ್ಮಿಸುವ ಮೂಲಕ ಕನ್ನಡ ಭಾಷೆ ಹಾಗೂ ಸಾಹಿತ್ಯ ಬೆಳೆಸುವ ಕಾರ್ಯ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ಪೋಷಕರು ಆಂಗ್ಲಮಾಧ್ಯಕ್ಕೆ ಜೋತು ಬಿದ್ದು ತಮ್ಮ ಮಕ್ಕಳಿಗೆ ಆಂಗ್ಲಮಾಧ್ಯಮದ ಶಿಕ್ಷಣ ಕೊಡಿಸುತ್ತಿದ್ದಾರೆ. ಇದೇ ಹಾದಿಯಲ್ಲಿ ಸಾಗಿದರೆ ಕನ್ನಡ ಸಾಹಿತ್ಯ ರಚನೆ ಮಾಡುವವರು ಇಲ್ಲದಂತಾಗಲಿದೆ. ಸಾಹಿತ್ಯ ವೇದಿಕೆಗಳು ಮಕ್ಕಳನ್ನು ಮುಂದಿಟ್ಟುಕೊಂಡು ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದರು.

ಉತ್ತಮ ಬೆಳವಣಿಗೆ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ಚನ್ನರಾಯಪಟ್ಟಣ ತಾಲೂಕಿನಿಂದ ಆರಂಭವಾದ ಮಕ್ಕಳ ಸಾಹಿತ್ಯ ಪರಿಷತ್ತು ಇಂದು ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಘಟಕವನ್ನು ಹೊಂದಿದ್ದು, ಪ್ರಥಮವಾಗಿ ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ನ.29 ಹಾಗೂ 30ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಸಮ್ಮೇಳ ನಡೆಯಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು ಎರಡು ಸಾವಿರ ಮಕ್ಕಳು ಪಾಲ್ಗೊಳ್ಳಲಿದ್ದಾರೆ ಎಂದರು. ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯದ ಅನೇಕ ತಾಲೂಕಿನಲ್ಲಿ ಇದ್ದರೂ ಚನ್ನರಾಯಪಟ್ಟಣ ತಾಲೂಕಿನವರೇ ಹೆಚ್ಚು ಆಸಕ್ತಿ ವಹಿಸಿ ಸಮ್ಮೇಳನ ಹಾಗೂ ವಿವಿಧ ಕಾರ್ಯಕ್ರಮದ ನೇತೃತ್ವ ವಹಿಸಿರುವುದು ಶ್ಲಾಘನೀಯ ಎಂದರು.

Advertisement

ತುಳುನಾಡಿನ ಅರಿಹಂತಗಿರಿ ಧವಲಕೀರ್ತಿ ಭಟ್ಟಾರಕ ಸಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ರಾಘವೇಂದ್ರ, ಮಕ್ಕಳ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಎನ್‌.ಅಶೋಕ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಪ್ರಕಾಶಜೈನ್‌, ಸಚಿನ್‌, ಶ್ರೀನಿವಾಸ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next