Advertisement
ಪದವಿ ಪೂರ್ವ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಕೊಡಗು ಜಿಲ್ಲಾ ಇಕೋ ಕ್ಲಬ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಹಾಗೂ ಅರಣ್ಯ ಇಲಾಖೆಯ ಅರಣ್ಯ ವಲಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ಮೇಕೇರಿ ಗ್ರಾಮದಲ್ಲಿ 65 ನೇ ವನ್ಯಜೀವಿ ಸಪ್ತಾಹ 2019 ಅಂಗವಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪರಿಸರ ಜಾಗೃತಿ ನಡೆಯಿತು.
Related Articles
ಪ್ರಾಂಶುಪಾಲ ಪಿ.ಆರ್.ವಿಜಯ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಎಂ.ಬಿ.ಕುಸುಮಾವತಿ, ವಿದ್ಯಾರ್ಥಿಗಳು ತಮ್ಮ ಅರಣ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುಬೇಕು ಎಂದರು. ವಿನಾಶದಂಚಿನತ್ತ ಸಾಗುತ್ತಿರುವ ಅರಣ್ಯ, ವನ್ಯಜೀವಿಗಳು ಮತ್ತು ಪರಿಸರವನ್ನು ಉಳಿಸುವತ್ತ ಗಮನಹರಿಸದಿದ್ದಲ್ಲಿ ಮುಂದಿನ ಪೀಳಿಗೆಗೆ ಇವುಗಳನ್ನು ನೋಡುವ ಅವಕಾಶ ಇಲ್ಲದಂತಾಗುತ್ತದೆ. ಅರಣ್ಯ ಮತ್ತು ವನ್ಯ ಜೀವಿಗಳ ಉಳಿಸಿ ಬೆಳೆಸುವುದು ಕರ್ತವ್ಯವಾಗಿದೆ ಎಂದರು. ಶಿಬಿರಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ಅರಣ್ಯ, ಪರಿಸರ ವನ್ಯಜೀವಿ ಸಂರಕ್ಷಣೆ ಜಾಗೃತಿ ಮೂಡಿಸಿದರು.
Advertisement