Advertisement
ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
Related Articles
Advertisement
ಒಂದು ಕುಟುಂಬಕ್ಕೆ ಎರಡೇ ಮಕ್ಕಳು ಎಂದು ಜನಸಂಖ್ಯಾ ನಿಯಂತ್ರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ನಿರ್ಣಯ ಸಕಾಲಿಕ. ರಾಜ್ಯದಲ್ಲೂ ಶೀಘ್ರವೇ ಇದರ ಅನುಷ್ಠಾನದ ಕುರಿತು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವಕೆ.ಎಸ್.ಈಶ್ವರಪ್ಪ ಹೇಳಿದ್ದರು.
ಇದನ್ನೂ ಓದಿ:ಮಾಸ್ಕ್ ಧರಿಸದೇ ಜನರು ಗುಂಪುಗೂಡುವುದು ಕಳವಳಕಾರಿ: ಸಿಎಂಗಳ ಸಭೆಯಲ್ಲಿ ಪ್ರಧಾನಿ
ಸೋಮವಾರ ಶಿವಮೊಗ್ಗದಲ್ಲಿ ಮಾತನಾಡಿದ್ದ ಅವರು, ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ನಿಯಂತ್ರಣಕ್ಕೆ ಬಹಳ ವರ್ಷದಿಂದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೂ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಈಗ ಕಾರ್ಯೋನ್ಮುಖವಾಗಿದೆ. ಅಲ್ಲಿನ ಪ್ರಯತ್ನ ನೋಡಿಕೊಂಡು ನಮ್ಮ ರಾಜ್ಯದಲ್ಲೂ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲರೂ ಕುಳಿತು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು