Advertisement

ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ಉಚ್ಛಾಟನೆ ಅನಿವಾರ್ಯ: ಹಾಲಪ್ಪ

03:18 PM Apr 22, 2022 | Team Udayavani |

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ.

Advertisement

ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು.

ಮೋದಿಯವರು ದೇಶದ ಸಮಗ್ರತೆಗಾಗಿ ಅಹರ್ನಿಶಿ ದುಡಿಯುತ್ತಿದ್ದರೂ ಕೆಲವರು ಪ್ರಶ್ನಿಸುತ್ತಲೇ ಇದ್ದಾರೆ. ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ನಾವೆಲ್ಲಾ ಭಾರತಾಂಬೆಯ ಮಕ್ಕಳು. ಭಾರತ ದೇಶದಲ್ಲಿರುವ ಎಲ್ಲರೂ ಭಾರತ ಮಾತೆಗೆ ಜೈಕಾರ ಹಾಕಬೇಕು ಎಂದರು.

ರಾಜ್ಯದಲ್ಲಿ ಶೇ. 40 ಕಮಿಷನ್ ಜೋರಾಗಿ ಸದ್ದು ಮಾಡುತ್ತಿದೆ. ವಾಸ್ತವಾಂಶವೆಂದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ. 24ರಷ್ಟು ಬೇರೆಬೇರೆ ಉದ್ದೇಶಕ್ಕೆ ಸರ್ಕಾರ ಸೆಸ್ ರೂಪದಲ್ಲಿ ಕಡಿತ ಮಾಡುತ್ತದೆ. ಕಾಮಗಾರಿಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಹೆಚ್ಚೆಂದರೆ ಶೇ. 10ರಷ್ಟು ಲಾಭ ಪಡೆಯುತ್ತಾನೆ. ಇದು ಜನಸಾಮಾನ್ಯರಿಗೆ ತಿಳಿದಿಲ್ಲ. ಇದರಿಂದಾಗಿ ಕಾಂಗ್ರೆಸ್‌ನವರು ಬಿಂಬಿಸುತ್ತಿರುವ ಶೇ. 40 ಕಮೀಷನ್ ರೆಕ್ಕೆಪುಕ್ಕ ಪಡೆದುಕೊಂಡಿದೆ. ಪಕ್ಷದ ಕಾರ್ಯಕರ್ತರು ಜನರಿಗೆ ವಾಸ್ತವಾಂಶ ತಿಳಿಸುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ:ಶಾಂತಿ ಕದಡುವ ಸಂಘಟನೆಗಳನ್ನು ಬ್ಯಾನ್ ಮಾಡಲಿ; ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ವಿಕಲಚೇತನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪೋಷಕರು ಮತ್ತು ಮಕ್ಕಳ ಹೆಸರಿನಲ್ಲಿ 40 ಸಾವಿರ ರೂ. ಬಾಂಡ್ ನೀಡಲಾಗುತ್ತಿದೆ. ಇದು ಅವರಿಗೆ 50 ಸಾವಿರಕ್ಕೂ ಅಧಿಕವಾಗಿ ಕೈಸೇರುತ್ತದೆ. ವಿಕಲಚೇತನ ಮಕ್ಕಳ ಲಾಲನೆಪಾಲನೆಗೆ ಪೋಷಕರಿಗೆ ಈ ಹಣ ಭವಿಷ್ಯದಲ್ಲಿ ನೆರವಿಗೆ ಬರುತ್ತದೆ. ಜೊತೆಗೆ ವಾಜಪೇಯಿ ವಸತಿ ಯೋಜನೆಯಡಿ 45 ಫಲಾನುಭವಿಗಳಿಗೆ ವಸತಿ ಕಾಮಗಾರಿ ಆರಂಭ ಮಾಡಲು 1.75 ಲಕ್ಷ ರೂ. ಕಾರ್ಯಾದೇಶ ನೀಡಲಾಗಿದೆ ಎಂದರು.

ಪೌರಾಯುಕ್ತ ರಾಜು ಡಿ. ಬಣಕಾರ್, ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಮಧುಮಾಲತಿ, ಪ್ರೇಮ ಸಿಂಗ್, ಸುಧಾ ಉದಯ್, ಬಿ.ಎಚ್.ಲಿಂಗರಾಜ್, ಗಣೇಶ್‌ಪ್ರಸಾದ್, ಸವಿತಾ ವಾಸು, ರಾಜೇಂದ್ರ ಪೈ, ಶ್ರೀರಾಮ್, ಸತೀಶ್ ಕೆ., ಆಶ್ರಯ ಸಮಿತಿಯ ಯು.ಎಚ್.ರಾಮಪ್ಪ, ಮಂಜಪ್ಪ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next