Advertisement

ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ

09:29 PM Apr 09, 2020 | Sriram |

ಬೆಂಗಳೂರು: ಎಲ್ಲರೂ ಮುಖಗವಸು (ಮಾಸ್ಕ್) ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಣೆ ಹೊರಡಿಸಿದೆ.

Advertisement

ಈ ಹಿಂದೆ ಆರೋಗ್ಯ ಇಲಾಖೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಪ್ರಕಟಣೆ ಹೊರಡಿಸಿತ್ತು. ಸದ್ಯ ಆ ನಿರ್ಣಯದಿಂದ ಹಿಂದೆ ಸರಿದಿರುವ ಆರೋಗ್ಯ ಇಲಾಖೆ, ಸಾರ್ವಜನಿಕರು ಅಪರಿಚಿತರೊಂದಿಗೆ ವ್ಯವಹರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಗುರುವಾರ ಹೊಸದಾಗಿ ಪ್ರಕಟಣೆ ಹೊರಡಿಸಿದೆ.

ಅಗತ್ಯ ವಸ್ತುಗಳ ಖರೀದಿ ವೇಳೆ, ಕಚೇರಿ ಕೆಲಸಗಳಲ್ಲಿ ಪಾಲ್ಗೊಳ್ಳುವಾಗ ಮತ್ತು ಕೋವಿಡ್‌ 19 ಸೋಂಕಿತ ವ್ಯಕ್ತಿಗಳೊಂದಿಗೆ ಗೊತ್ತಿದ್ದು ಅಥವಾ ಗೊತ್ತಿಲ್ಲದೆಯೇ ಸಂಪರ್ಕ ಸಾಧಿಸುವಾಗ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ.

ವಯಸ್ಕರು ಧರಿಸುವ ಮಾಸ್ಕ್ ಅಳತೆ 7ರಿಂದ 9 ಇಂಚು ಮತ್ತು ಮಕ್ಕಳು ಧರಿಸುವ ಮಾಸ್ಕ್ ಅಳತೆ 5 ರಿಂದ 7 ಇಂಚು ಇರಬೇಕು ಎಂದು ಶಿಫಾರಸು ಮಾಡಲಾಗಿದೆ. ಬಳಸದೇ ಇರುವ ಬನಿಯನ್‌, ಟೀ ಶರ್ಟ್‌ ಅಥವಾ ಕರವಸ್ತ್ರದಂತಹ ಹಳೆಯ ಹತ್ತಿ ಬಟ್ಟೆಯಿಂದ ಮಾಸ್ಕ್ ತಯಾರಿಸಿಕೊಳ್ಳಬಹುದು. ಸಿಂಥೆಟಿಕ್‌ ಬಟ್ಟೆಗಳನ್ನು ಬಳಸುವುದು ಸೂಕ್ತವಲ್ಲ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next