Advertisement
ಕುಮಾರಸ್ವಾಮಿ ಪತ್ರದ ಸಾರಾಂಶ“”ಮೊದಲನೆಯದಾಗಿ, ನನ್ನ ಪ್ರಶ್ನೆ ಎತ್ತಿದರೆ ಸಾಕು, ಅವರಪ್ಪನಾಣೆ ಗೆಲ್ಲಲ್ಲ ಎಂದು ನೀವು ಉದ^ರಿಸುತ್ತೀರಿ. ತಂದೆಯೇ ಗುರು, ಗುರುವೇ ತಂದೆ ಎಂಬುದು ಭಾರತೀಯರ ನಂಬಿಕೆ. ಪದೇ ಪದೇ ಅವರಪ್ಪನಾಣೆ ಎನ್ನುವ ಮೂಲಕ ನೀವು ತಂದೆ ಸ್ಥಾನದಲ್ಲಿರುವವರಿಗೆ, ಗುರುಗಳಿಗೆ, ಇಡೀ ಭಾರತೀಯರ ನಂಬುಗೆಗಳಿಗೆ ಭಂಗ ತರುತ್ತಿದ್ದೀರಿ. ನೀವಿಡುತ್ತಿರುವ ಪ್ರತೀ ಪ್ರಮಾಣಗಳು ನಿಮ್ಮ ಭವಿಷ್ಯವನ್ನೇ ಸುತ್ತುವರಿಯಲಿವೆ ಎಚ್ಚರ. ಕಾಕತಾಳಿಯವೆಂಬಂತೆ ನನ್ನ ತಂದೆ ದೇವೇಗೌಡರು ನಿಮ್ಮ ರಾಜಕೀಯ ಗುರು. ಗುರುವಿಗೇ ಗೌರವ ಕೊಡದ, ಗುರುವಿಗೆ ನಿಷ್ಠರಲ್ಲದ ನೀವು ಜನರಿಗೆ ಗೌರವ ಕೊಡುವಿರೇ?
Related Articles
Advertisement
ಜೆಡಿಎಸ್‌ನಲ್ಲಿದ್ದಿದ್ದರೆ ನಾನು ಮುಖ್ಯಮಂತ್ರಿಯಾಗಿರುತ್ತಿದ್ದೆ. ಕುಮಾರಸ್ವಾಮಿಗೆ ಅಧಿಕಾರ ಸಿಗುತ್ತಿರಲಿಲ್ಲ. ಮಕ್ಕಳನ್ನು ಮುಖ್ಯಮಂತ್ರಿ ಮಾಡಲೆಂದೇ ನನ್ನನ್ನು ಹೊರ ಹಾಕಲಾಯಿತು ಎಂದು ಆರೋಪಿಸಿದ ನೀವು ಕಡೆಗೂ ಸತ್ಯ ಒಪ್ಪಿಕೊಂಡಿದ್ದೀರಿ. ಈ ಮಾತಿನೊಂದಿಗೆ ದೇವೇಗೌಡರು ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ವಂಚಿಸಿದರು ಎಂಬ ನಿಮ್ಮ ಆರೋಪವನ್ನು ಸ್ವತಃ ನೀವೇ ಸುಳ್ಳು ಎಂದು ಸಾರಿ ಹೇಳಿದ್ದೀರಿ. ಜೆಡಿಎಸ್ 25 ಸ್ಥಾನಗಳನ್ನೂ ಗೆಲ್ಲವುದಿಲ್ಲ ಎಂದು ಭವಿಷ್ಯ ನುಡಿದಿದ್ದೀರಿ. ಭಾಷ್ಯ ಬರೆಯಬೇಕಾದವರು ನಾಡಿನ ಜನ. ನಮ್ಮ ಪಕ್ಷದ ಗೆಲುವಿನ ಬಗ್ಗೆ ಮಾತನಾಡುವ ಮುನ್ನ ಚಾಮುಂಡೇಶ್ವರಿಯಲ್ಲಿ ನಿಮ್ಮ ಗೆಲುವಿನ ಬಗ್ಗೆ ಚಿಂತಿಸಿ.
ಜೆಡಿಎಸ್‌ಗೆ ಬೀಳುವ ಪ್ರತಿ ಮತ ಬಿಜೆಪಿಗೆ ಸಿಗುವ ಗೆಲುವಲ್ಲ, ಕಾಂಗ್ರೆಸ್‌ನ ಸೋಲು. ಕಾಂಗ್ರೆಸ್‌ಗೆ ಹಾಕುವ ಒಂದೊಂದು ಮತವೂ ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೇಕಾದ ಖರ್ಚಿನ ಹಣವಾಗಿ ಪರಿವರ್ತನೆಯಾಗಲಿದೆ. ಕಾಂಗ್ರೆಸ್ ಅಧಿಕಾರ ಪಡೆದಿದ್ದೇ ಆದರೆ ರಾಜ್ಯವನ್ನು ಲೂಟಿ ಮಾಡಲಿದೆ. ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಟಿಎಂ ರೀತಿಯಂತಾಗಲಿದೆ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹಾಕುವ ಪ್ರತಿ ಮತವೂ ಲೂಟಿಕೋರರಿಗೆ ನೀಡಿದ ಪ್ರೋತ್ಸಾಹವಾಗಲಿದೆ.
ಉತ್ತರ ಕರ್ನಾಟಕದಲ್ಲಿ ಬಸವಣ್ಣ ಎನ್ನುವ ನೀವು, ಹಳೇ ಮೈಸೂರಿನಲ್ಲಿ ಕೆಂಪೇಗೌಡ ಎನ್ನುತ್ತೀರಿ. ಈ ಇಬ್ಬರೂ ಮಹ ನೀಯರು ಕಾಲ, ದೇಶ,ಪ್ರಾಂತ್ಯವನ್ನು ಮೀರಿದ ವಿಶ್ವಮಾನ ವರು ಎಂಬುದನ್ನು ಮರೆತು ಮತಕ್ಕಾಗಿ ಅವರ ಭಜನೆ ಮಾಡುತ್ತೀರಿ. ಹೀಗಿರುವಾಗ ನಿಮ್ಮಂಥವರಿಂದ ಜಾತ್ಯತೀತತೆ,ಬದ್ಧತೆ ಯನ್ನು ಹೇಳಿಸಿಕೊಳ್ಳುವ ಅಗತ್ಯತೆ ನಮಗಿಲ್ಲ”.