Advertisement

ಐಟಿ ದಾಳಿಯಲ್ಲಿ ನನ್ನ ಪಾತ್ರ ಇಲ್ಲ: ಸತೀಶ್‌ ಜಾರಕಿಹೊಳಿ

03:45 AM Jan 27, 2017 | Team Udayavani |

ಬೆಂಗಳೂರು: ಸಣ್ಣ ಕೈಗಾರಿಕೆ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳ್ಕರ್‌ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಡಿರುವ ದಾಳಿಯ ಹಿಂದೆ ನನ್ನ ಕೈವಾಡ ಇಲ್ಲ ಎಂದು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಐಟಿ ಇಲಾಖೆ ಅಧಿಕಾರಿಗಳು ಈಗಾಗಲೇ ಈ ಬಗ್ಗೆ ಯಾರದೇ ಕೈವಾಡ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ನನಗೂ ಐಟಿ ದಾಳಿಗೂ ಯಾವ ರೀತಿಯಲ್ಲೂ ಸಂಬಂಧ ಇಲ್ಲ ಎಂದು ಹೇಳಿದರು.

ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿಲ್ಲ. ತಮ್ಮನ್ನು ಭೇಟಿ ಮಾಡುವಂತೆ  ಅವರೂ ಸಹ ನನಗೆ ಯಾವುದೇ ಸೂಚನೆ ನೀಡಿಲ್ಲ. ನಾನು ಸಾಮಾಜಿಕ ಕೆಲಸಗಳಲ್ಲಿ ನಿರತನಾಗಿದ್ದೇನೆ. ಅದರಲ್ಲಿ ಸಕ್ರೀಯನಾಗಿರುವುದರಿಂದ ಮತ್ತೆ ಸಂಪುಟ ಸೇರುವುದು ಕಷ್ಟ ಎಂದು ತಿಳಿಸಿದರು.

ಸಚಿವ ಸ್ಥಾನ ಕಳೆದುಕೊಂಡ ಮೇಲೆ ನಾನು ಜೆಡಿಎಸ್‌ ಸೇರುತ್ತೇನೆ ಎಂಬ ಮಾತು ಕೇಳಿ ಬಂತು. ನಾನು ಮೊದಲು ಜೆಡಿಎಸ್‌ನಲ್ಲಿ ಇದ್ದೆ, ಹೀಗಾಗಿ ಜೆಡಿಎಸ್‌ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಈಗ ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿಯೇ ಕೆಲಸ ಮಾಡಲು ಸಿದ್ದನಾಗಿದ್ದೇನೆ ಎಂದು ಹೇಳಿದರು.

ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಟ್ಟು ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಎಂಬ ಮಾಹಿತಿ ಗೊತ್ತಿಲ್ಲ. ಆ ರೀತಿಯ ಮಾಹಿತಿ ಬಂದಾಗ ತಿಳಿಸುತ್ತೇನೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next