Advertisement

ರೈತರು ಆತ್ಮಹತ್ಯೆ ಬೆದರಿಕೆ ಹಾಕುವುದು ಸರಿಯಲ್ಲ: ಡಿಕೆಶಿ

06:35 AM Jun 19, 2018 | Team Udayavani |

ಬೆಂಗಳೂರು: “ರೈತರು ಸರ್ಕಾರಕ್ಕೆ ಆತ್ಮಹತ್ಯೆ ಬೆದರಿಕೆ ಹಾಕುವುದು ಸರಿಯಲ್ಲ’ ಎಂದು ಜಲ ಸಂಪನ್ಮೂಲ
ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ರೈತರು ಸರ್ಕಾರವನ್ನು ಹೆದರಿಸುವುದು ಬೇಡ. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನದ ಕೆಲಸ. ರಾಜ್ಯ ಸರ್ಕಾರ ರೈತರ ಅನುಕೂಲಕ್ಕೆ ಅಗತ್ಯ ಯೋಜನೆ ಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿರುವುದರಿಂದ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ. ನಿರ್ವಹಣಾ ಮಂಡಳಿಯಲ್ಲಿ ರಾಜ್ಯದ ಪರವಾಗಿ ಯಾರು ಸದಸ್ಯರಿರಬೇಕು ಎಂದು ಇನ್ನೂ ನೇಮಕ ಮಾಡಿಲ್ಲ. ಕೇಂದ್ರ ಸರ್ಕಾರ
ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದೆ. ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದರು.

ಬೆಂಗಳೂರಿನ ಅಂತರ್ಜಲದ ಬಗ್ಗೆ ನೀತಿ ಆಯೋಗ ಆತಂಕ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿರುವ ಅವರು, ಬೆಂಗಳೂರಿಗರ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ.

ಕುಡಿಯುವ ನೀರಿನ ವಿಷಯದಲ್ಲಿ ಸುಪ್ರೀಂಕೋರ್ಟ್‌ ಈಗಾಗಲೇ ಆದೇಶ ನೀಡಿದ್ದು, ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

Advertisement

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಂಗಳೂರಿನ ಅಭಿವೃದಿಟಛಿ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಈಗಾಗಲೇ ಇನ್‌ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿಯವರನ್ನು ಭೇಟಿ ಮಾಡಿ ಸಲಹೆ ಕೇಳಿದ್ದಾರೆ. ಎಲ್ಲರ ಸಲಹೆ ಪಡೆದು ಸೂಕ್ತ ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಗೌರಿ ಹತ್ಯೆಯ ಬಗ್ಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಇದ್ದರೂ, ನಾವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ತನಿಖೆ ನಡೆಯುತ್ತಿದ್ದು, ತನಿಖೆ ಸಂದರ್ಭದಲ್ಲಿ ಗೃಹ ಇಲಾಖೆ
ಅಥವಾ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ತಪ್ಪಿತಸ್ಥರನ್ನು ಆದಷ್ಟು ಬೇಗ ಜನರ ಮುಂದೆ ನಿಲ್ಲಿಸುತ್ತೇವೆ.

–  ಡಿ.ಕೆ.ಶಿವಕುಮಾರ್‌, ಸಚಿವ

Advertisement

Udayavani is now on Telegram. Click here to join our channel and stay updated with the latest news.

Next