ಕುರುಗೋಡು: ರಾಜ್ಯದಲ್ಲಿ ಕುಂಬಾರ ಸಮುದಾಯವು ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ’ಎಂದು ಸಿರಿಗೇರಿಯ ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹೇಳಿದರು.
ಕುಂಬಾರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗ್ರಾಮದ ಮುಖಂಡರು ಸಿರಿಗೇರಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 502ನೇ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕುಂಬಾರ ಸಮುದಾಯದಿಂದ ಶಾಸಕರು, ಸಂಸದರು, ವಿಧಾನ ಪರಿಷತ್, ರಾಜ್ಯಸಭಾ ಸದಸ್ಯರು ಇಲ್ಲ. ಹೀಗೆ ಅತ್ಯಂತ ಹಿಂದುಳಿದ ಸಮುದಾಯವನ್ನು ಸರ್ಕಾರಗಳು ನಿರ್ಲಕ್ಷಿಸುತ್ತಿವೆ. ಯಾವುದೇ ಪಕ್ಷವು ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ನೀಡಿಲ್ಲ. ರಾಜಕೀಯ ಅಧಿಕಾರ ದೊರೆತರೆ ಮಾತ್ರ ಸಣ್ಣ ಪುಟ್ಟ ಸಮುದಾಯಗಳು ಬೆಳವಣಿಗೆಯಾಗಲು ಸಾಧ್ಯ ಎಂದರು.
ಇದನ್ನೂ ಓದಿ:ಅಂಕೋಲಾ: ರೆಸ್ಟೋರೆಂಟ್ ಗೆ ನುಗ್ಗಿ ಮುಸುಕುಧಾರಿಗಳಿಂದ ಲಕ್ಷಾಂತರ ನಗದು,ಮದ್ಯದ ಬಾಟಲಿ ಕಳ್ಳತನ
ಸರ್ಕಾರದಿಂದ ಸರ್ವಜ್ಞ ದಿನಾಚರಣೆಯ ಆಚರಣೆ, ಸರ್ವಜ್ಞ ಪ್ರಾಧಿಕಾರ ರಚನೆ ಸೇರಿದಂತೆ ಕುಂಬಾರ ಸಂಘವು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ. ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಕುಂಬಾರರು ಸೇರಿದಂತೆ ಇತರೆ ಹಲವಾರು ಸೌಲಭ್ಯ ವಂಚಿತ, ನಿರ್ಲಕ್ಷಿತ ಸಮುದಾಯಗಳಿಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಾರಂಭದಲ್ಲಿ ಕವಿ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪ ಹೂ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂಬಾರು ಸಮುದಾಯದ ಯುವ ಮುಖಂಡರು ಹಾಗೂ ಗ್ರಾಮದ ವಿವಿಧ ಸಮುದಾಯದ ಮುಖಂಡರು, ಸಂಘಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.