Advertisement

Belagavi; ಸಂತ್ರಸ್ತರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವದು ಸರಿಯಲ್ಲ: ಈರಣ್ಣ ಕಡಾಡಿ

02:57 PM Aug 04, 2024 | Team Udayavani |

ಬೆಳಗಾವಿ: ಪ್ರತಿವರ್ಷ ಪ್ರವಾಹ ಬಂದಾಗ ಸಂತ್ರಸ್ತರಿಗೆ ಪರಿಹಾರ ಕೊಟ್ಟು ಕೈ ತೊಳೆದು ಕೊಳ್ಳುವದು ಸೂಕ್ತವಲ್ಲ. ಇದಕ್ಕೆ ಶಾಶ್ವತ ಪರಿಹಾರ ಕೊಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.

Advertisement

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಆ 05) ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಿದ್ದು ಅವರ ಭೇಟಿ ಕಣ್ಣೊರೆಸುವ ತಂತ್ರವಾಗಬಾರದು ಎಂದರು.

ಜಿಲ್ಲೆಯಲ್ಲಿ ಈ ಬಾರಿಯೂ ಮಳೆ ಮತ್ತು ನೆರೆಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದೆ. ಕನಿಷ್ಠ 20 ಸಾವಿರ ಜನರು ಸಂತ್ರಸ್ತರಾಗಿದ್ದಾರೆ. ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಮನೆಗಳನ್ನು ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಕೇವಲ ಆಹಾರದ ವ್ಯವಸ್ಥೆ ಮಾಡಲಾಗಿದೆ. ಆದರೆ ಪರಿಹಾರದ ಮಾತೇ ಇಲ್ಲ ಎಂದು ಈರಣ್ಣ ಕಡಾಡಿ ಟೀಕೆ ಮಾಡಿದರು.

ಬಿಜೆಪಿ ಸರಕಾರ ಇದ್ದಾಗ ಪೂರ್ಣ ಮನೆ ಬಿದ್ದವರಿಗೆ ಐದು ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗಿನ ಸರಕಾರ ಕೇವಲ 1.25 ಲಕ್ಷ ರೂ ನಿಗದಿ ಮಾಡಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಬಿಜೆಪಿ ಸರಕಾರ ಇದ್ದಾಗ ಎನ್ ಡಿಆರ್ಎಫ್ ಮಾರ್ಗಸೂಚಿಗಳನ್ನು ಮೀರಿ ತಕ್ಷಣಕ್ಕೆ ಸಂತ್ರಸ್ತರಿಗೆ 10 ಸಾವಿರ ರೂ ಪರಿಹಾರ ಕೊಡಲಾಗಿತ್ತು. ಅದೇ ರೀತಿ ಈಗ ಎಷ್ಟು ಪರಿಹಾರ ಕೊಡಲಾಗುವದು ಎಂಬುದನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಕಡಾಡಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next