Advertisement

ಐಟಿ ದಾಳಿ ಯಾರ ಮೇಲೂ ಕ್ರಮ ಇಲ್ಲ: ಗುಂಡೂರಾವ್‌

03:45 AM Jan 27, 2017 | Team Udayavani |

ಬೆಂಗಳೂರು: ಸಣ್ಣ ಕೈಗಾರಿಕೆ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಮನೆ ಮೇಲೆ ಐಟಿ ದಾಳಿ ಮಾಡಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಹೀಗಾಗಿ ಅವರಿಬ್ಬರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ನಡೆದ 68 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆದಾಯ ತೆರಿಗೆ ಅಧಿಕಾರಿಗಳು ರಮೇಶ್‌ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳ್ಕರ್‌ ಅವರ ವಿರುದ್ಧ ದಾಳಿ ಮಾಡಿದಾಗ ಎಷ್ಟು ಅಕ್ರಮ ಸಂಪತ್ತು ದೊರೆತಿದೆ ಎಂಬುದರ ಬಗ್ಗೆ ಮಾಹಿತಿಯಿಲ್ಲ. ಈ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಯಾರ ಮೇಲೂ ಅನಗತ್ಯ ಕ್ರಮ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಇತ್ತೀಚಿನ ದಿನಗಳಲ್ಲಿ ಮಾತಿನ ಗಾಂಭೀರ್ಯ ಕಳೆದುಕೊಳ್ಳುತ್ತಿದ್ದಾರೆ. ಅವರ ಪಕ್ಷದ ಆಂತರಿಕ ಸಮಸ್ಯೆ ಕುರಿತು ಜನರ ಗಮನ ಬೇರೆಡೆ ಸೆಳೆಯಲು ನಮ್ಮ ಪಕ್ಷ ಮತ್ತು ನಾಯಕರ ಬಗ್ಗೆ ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next