Advertisement

ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯ: ಸಿದ್ದರಾಮಯ್ಯ

09:27 AM Apr 20, 2020 | keerthan |

ಬೆಂಗಳೂರು: ರಾಜ್ಯದ ಸದ್ಯ ಕೋವಿಡ್-19 ಸೋಂಕು ಸಂಕಷ್ಟದ ಸಮಯದಲ್ಲಿದ್ದು, ಇಂತಹ ಸಮಯದಲ್ಲಿ ಸರಿಯಾದ ಸಲಹೆಗಳನ್ನು ನೀಡುತ್ತಾ, ಸಮಸ್ಯೆಗಳಿಗೆ ಪರಿಹಾರ ನೀಡುತ್ತಾ ಸರಕಾರದ ಜೊತೆಗೆ ಹೆಜ್ಜೆ ಹಾಕುವುದು ನಮ್ಮ ಕರ್ತವ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ , ಮಾಜಿ ಡಿಸಿಎಂ ಜಿ.ಪರಮೇಶ್ವರ್‌, ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಒಳಗೊಂಡ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ನಿಯೋಗ ಇಂದು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದರು. ಅಲ್ಲದೆ, ಕೋವಿಡ್-19 ವೈರಸ್‌ ತಡೆಗಟ್ಟುವ ಕ್ರಮ ಹಾಗೂ ತತ್‌ಕ್ಷಣ ರಾಜ್ಯ ಸರ್ಕಾರ ಗಮನಹರಿಸಬೇಕಾದ ಪ್ರಮುಖ ವಿಷಯಗಳ ಕುರಿತ 15 ಅಂಶದ ವರದಿ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಆಡಳಿತ ಸರ್ಕಾರದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯ” ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next