Advertisement
ನ. 30ರಂದು ವಾಶಿಯ ಬಸ್ ಡಿಪೋ ಹಿಂದುಗಡೆಯ ನವಿ ಮುಂಬಯಿ ಕನ್ನಡದ ಎಂ. ಬಿ. ಕುಕ್ಯಾನ್ ಸಭಾಗೃಹದಲ್ಲಿ ನವಿಮುಂಬಯಿ ಸಂಘದ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಲ್ಲ ಜಾತಿ, ಧರ್ಮ,ಮತ ಭಾಷೆಯ ಬೇಧವಿಲ್ಲದೆ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುವುದು ಸಂತೋಷದ ಸಂಗತಿಯಾಗಿದೆ. ನಮ್ಮ ಸಂಸ್ಕೃತಿ, ಸಂಸ್ಕಾರದ ತವರೂರು ನಮ್ಮ ಕನ್ನಡ ನಾಡಾಗಿದೆ. ಯುವ ಪೀಳಿಗೆಯಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿರುಚಿ ಅರಿವು ಮೂಡಿಸಬೇಕು. ಮುಂಬಯಿ ಮಹಾನಗರದ ಸಂಘ–ಸಂಸ್ಥೆಗಳು ಕನ್ನಡದ ಏಳ್ಗೆಗಾಗಿ ಶ್ರಮಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು.
Related Articles
Advertisement
ಮುಖ್ಯ ಅತಿಥಿ ಡಾ| ಕರುಣಾಕರ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಸದಸ್ಯೆಯರು ನಾಡಗೀತೆಯನ್ನು ಹಾಡಿದರು. ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥ ರಘು ಮೂಲ್ಯ ಸ್ವಾಗತಿಸಿದರು.
ಅತಿಥಿಗಳನ್ನು ಸದಸ್ಯೆ ಸುಧಾ ಮೂರ್ತಿ ಪರಿಚಯಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗದೀಶ್ ರೈ ಸಮ್ಮಾನ ಪತ್ರ ವಾಚಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ದಿನೇಶ್ ಉಪರ್ಣ, ಜ್ಯೋತಿ ಪ್ರಸಾದ್, ಜಯರಾಮ್ ಶೆಟ್ಟಿ, ಕೋಶಾಧಿಕಾರಿ ಅನಿಲ್ ಕೆ. ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಮಧುಸೂದನ್ ರಾವ್ ಟಿ. ಆರ್. ಅವರು ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಮುಖ್ಯಸ್ಥೆ ಸುಜಾತಾ ರಾವ್ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಷೆಯ ಕಿತಾಪತಿ ಕನ್ನಡ ಕಿರು ಹಾಸ್ಯ ನಾಟಕ ಹಾಗೂ ಸಂಘದ ಸದಸ್ಯರ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.