Advertisement

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಕರ್ತವ್ಯ

02:40 PM Sep 22, 2022 | Team Udayavani |

ಚಿತ್ತಾಪುರ: ಅಂಗವಿಕಲರ ಸಬಲೀಕರಣಕ್ಕಾಗಿ ಜಾರಿಗೊಳಿಸಲಾದ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಮಂತ ಗುತ್ತೇದಾರ ಹೇಳಿದರು.

Advertisement

ತಾಲೂಕಿನ ದಿಗ್ಗಾಂವ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿಎಂಎಫ್‌ ಯೋಜನೆಯಡಿಯಲ್ಲಿ ಅಂಗವಿಕಲರ ಮೌಲ್ಯಮಾಪನ ಹಾಗೂ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಅಂಗವಿಕಲರನ್ನು ಗುರುತಿಸಿ ಅವರಿಗೆ ವಿಶಿಷ್ಟ ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ತಾಲೂಕಿನಲ್ಲಿ ಕಳೆದ 15 ವರ್ಷಗಳಿಂದ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಪರವಾಗಿ ಅವಿರತವಾಗಿ ಶ್ರಮಿಸುತ್ತಿರುವ ಅಂಗವಿಕಲರ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಮಹ್ಮದ ಇಬ್ರಾಹಿಂ ಮಾತನಾಡಿ, ಅಂಗವಿಕಲರು ಸರಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಯುಡಿಐಡಿ ಯೋಜನೆ ಜಾರಿಗೊಳಿಸಿದೆ. ಆದ್ದರಿಂದ ಅಂಗವಿಕಲರು ಯಡಿಐಡಿ ಕಾರ್ಡ್‌ ಮಾಡಿಕೊಳ್ಳಬೇಕು ಅಂದಾಗ ಮಾತ್ರ ಸರ್ಕಾರದ ಎಲ್ಲ ಯೋಜನೆಗಳ ಲಾಭ ದೊರೆಯಲಿದೆ ಎಂದು ಹೇಳಿದರು.

Advertisement

ಗ್ರಾಮ ಪಂಚಾಯಿತಿ ಸದಸ್ಯರಾದ ಹರಳಯ್ಯ ಬಡಿಗೇರ್‌, ಗುರುಶಾಂತ ಭಾಗೋಡಿ, ಚನ್ನವೀರ ಕಣಗಿ, ಪತ್ರಕರ್ತ ಕಾಶಿನಾಥ ಗುತ್ತೇದಾರ, ಅಂಗನವಾಡಿ ಮೇಲ್ವಿಚಾರಕಿ ಕವಿತಾ ಪಾಟೀಲ ಮಾತನಾಡಿದರು. ಗ್ರಾಮದ ಹಿರಿಯ ಮುಖಂಡ ಸಿದ್ಧಣ್ಣಗೌಡ ಮಾಲಿ ಪಾಟೀಲ ಉದ್ಘಾಟಿಸಿದರು. ಗ್ರಾಪಂ ಕಾರ್ಯದರ್ಶಿ ದೇವಿಂದ್ರ ಯರಗಲ್‌, ಮುಖಂಡರಾದ ಸುರೇಶ ಅಚ್ಚೇಲಿ, ಪರಮಾತ್ಮ ದೊಡ್ಡಮನಿ, ಅಬ್ದುಲ್‌ ಖಾದರ, ಮಲ್ಲಿಕಾರ್ಜುನ ತಳವಾರ, ಮಲ್ಲಿನಾಥ ಪಾಟೀಲ, ಕಾಶಪ್ಪ ಪೂಜಾರಿ, ಹುಸೇನ್‌ ದಿಗ್ಗಾಂವ, ಅಮೂಲ್ಯ, ತ್ರೀಶಾ, ಹಂಪಯ್ಯ ಅಲ್ಲೂರ ಇತರರು ಇದ್ದರು. ಸದಸ್ಯ ಹರಳಯ್ಯ ಬಡಿಗೇರನಿರೂಪಿಸಿ, ವಂದಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next