Advertisement

ಆಕಾಂಕ್ಷಿಗಳ ಋಣ ತೀರಿಸೋದು ಕರ್ತವ್ಯ

11:12 PM Jan 19, 2020 | Team Udayavani |

ಮೈಸೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕ್ಕೇರಲು ಕಾರಣರಾಗಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ಋಣ ತೀರಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಭಾನುವಾರ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ, ಸುದ್ದಿಗಾ ರರೊಂದಿಗೆ ಮಾತನಾಡಿ, ಸಚಿವ ಆಕಾಂಕ್ಷಿಗಳ ಋಣ ನಮ್ಮ ಮೇಲಿದ್ದು, ಅವರಿಂದಲೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ.

Advertisement

ಹೀಗಾಗಿ, ಅವರ ಋಣ ತೀರಿಸುವುದು ನಮ್ಮ ಕರ್ತವ್ಯ. ಈ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದರಿಂದ ಅವರ ವಿರುದ್ಧ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಿನಿಮಾ ಮಾಡಿಕೊಂಡಿರಲಿ ಸಾಕು. ಅವರು ಸಿಎಂ ಆಗಿದ್ದವರು. ಅವರ ಸ್ಥಾನಕ್ಕೆ ತಕ್ಕಂತೆ ಪದಬಳಕೆ ಮಾಡಬೇಕು.
-ಈಶ್ವರಪ್ಪ, ಸಚಿವ

Advertisement

Udayavani is now on Telegram. Click here to join our channel and stay updated with the latest news.

Next