ನವದೆಹಲಿ: ಕಾಡ್ಗಿಚ್ಚು ಎನ್ನುವುದೊಂದು ಗಂಭೀರ ವಿದ್ಯಮಾನ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಮಳೆ ಬರಲೆಂದು ಎಲ್ಲರೂ ಪ್ರಾರ್ಥಿಸುವ ಸಮಯವಿದು ಎಂದು ಹೇಳಿದೆ.
ಉತ್ತರಾಖಂಡದಲ್ಲಿ ಕಾಡ್ಗಿಚ್ಚು ಪ್ರಕರಣಗಳಿಗೆ ಸಂಬಂಧಿಸಿ, ರಿತುಪಮ್ ಉನ್ನಿಯಾಳ್ ಎಂಬ ವಕೀಲರು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸೂರ್ಯಕಾಂತ್ ಅವರುಳ್ಳ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಜೂ. 24ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು. ಜತೆಗೆ, ಇದೊಂದು ಗಂಭೀರ ವಿಚಾರವಾಗಿದ್ದು, ಮಳೆಗಾಗಿ ಪ್ರಾರ್ಥಿಸುವ ಸಂದರ್ಭ ಬಂದಿದೆ ಎಂದು ಅಭಿಪ್ರಾಯಪಟ್ಟಿತು.
Advertisement
ಉತ್ತರಾಖಂಡದ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಅವಘಡ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಇದರಿಂದ ಪರಿಸರಕ್ಕೆ ಅಪಾರ ಹಾನಿಯಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಉತ್ತರಾಖಂಡ ಸರ್ಕಾರಕ್ಕೆ ಮಾರ್ಗಸೂಚಿಗಳನ್ನು ನೀಡಬೇಕೆಂದು ವಕೀಲರು ನ್ಯಾಯಾಲಯವನ್ನು ಪ್ರಾರ್ಥಿಸಿದ್ದಾರೆ.