Advertisement

ಐಟಿ ಪೋರ್ಟಲ್‌ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವ ಅನುರಾಗ್‌ ಠಾಕೂರ್‌

07:52 PM Jul 06, 2021 | Team Udayavani |

ನವ ದೆಹಲಿ: ಹೊಸ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇನ್ಫೋಸಿಸ್‌ ತಂಡವು ಕಾರ್ಯತತ್ಪರವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

Advertisement

ಪೋರ್ಟಲ್‌ ನಲ್ಲಿನ ಸಮಸ್ಯೆ ಕುರಿತ ಕಾಂಗ್ರೆಸ್‌ ಟೀಕೆಗೆ ಪ್ರತಿಕ್ರಿಯಿಸಿದ ಠಾಕೂರ್‌, ಕೇಂದ್ರ ಸರ್ಕಾರವು ಈಗಾಗಲೇ ಇನ್ಫೋಸಿಸ್‌ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಮಾಹಿತಿ ನೀಡಿ ಕೂಡಲೇ ಪರಿಹರಿಸುವಂತೆ ಸೂಚಿಸಿದೆ ಎಂದಿದ್ದಾರೆ.

ಬೆಳಗ್ಗೆ ಈ ಕುರಿತು ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ನಾಯಕ ಶಶಿ ತರೂರ್‌, “4,200 ಕೋಟಿ ರೂ. ವೆಚ್ಚ ಮಾಡಿಯೂ, ಉದ್ದೇಶಿತ ಗುರಿ ಸಾಧಿಸುವಲ್ಲಿ ಸರ್ಕಾರ ವಿಫ‌ಲವಾಗಿದ್ದು, ಮತ್ತಷ್ಟು ಗೊಂದಲ ಸೃಷ್ಟಿಸಿದೆ’ ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ :ರಾಜ್ಯಕ್ಕೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಕೇಂದ್ರ ಸಚಿವರಲ್ಲಿ ಸುಧಾಕರ್ ಮನವಿ

Advertisement

Udayavani is now on Telegram. Click here to join our channel and stay updated with the latest news.

Next