Advertisement

ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಐಟಿ ದಾಳಿ-ದಾಖಲೆಗಳ ಪರಿಶೀಲನೆ

12:27 PM Feb 17, 2021 | Team Udayavani |

ಮಂಗಳೂರು: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ (ಫೆ.17) ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಖಾಸಗಿ ಆಸ್ಪತ್ರೆ ಮತ್ತುಆಸ್ಪತ್ರೆ ಮಾಲೀಕರ ಮನೆ ಮೇಲೆ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Advertisement

ಮಂಗಳೂರಿನಲ್ಲೂ ಪ್ರತಿಷ್ಟಿತ ಮೂರು ಖಾಸಗಿ ಆಸ್ಪತ್ರೆಗಳ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದ್ದು,  8 ಮಂದಿ ಅಧಿಕಾರಿಗಳ ತಂಡದಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಐಟಿ ಅಧಿಕಾರಿಗಳು ತಂಡ ತಂಡವಾಗಿ ಕರ್ನಾಟಕದ ವಿವಿಧ ನಗರಗಳಿಗೆ ಆಗಮಿಸಿದ್ದು ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ; ದೇಶಾದ್ಯಂತ ಸರಣಿ ವಿಧ್ವಂಸಕ ಕೃತ್ಯ ಸಂಚು ವಿಫಲ; ಇಬ್ಬರು PFI ಸದಸ್ಯರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next