Advertisement

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಖೇಣಿಗೆ ಶಾಕ್‌ ನೀಡಿದ ಐಟಿ ಅಧಿಕಾರಿಗಳು

02:33 PM May 11, 2018 | |

ಬೀದರ್‌: ಚುನಾವಣೆ ವೇಳೆ ಅಭ್ಯರ್ಥಿಗಳು ಮತ್ತವರ ಆಪ್ತರನ್ನು ಗುರಿಯಾಗಿಸಿಕೊಂಡು ವ್ಯಾಪಕ ದಾಳಿ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೀದರ್‌ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ , ನೈಸ್‌ ಸಂಸ್ಥೆಯ ಮಾಲೀಕ ಅಶೋಕ್‌ ಖೇಣಿಯವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

Advertisement

ಬೀದರ್‌ನ ರಾಂಪುರದಲ್ಲಿರುವ ಖೇಣಿ ನಿವಾಸದ ಮೇಲೆ ದಾಳಿ ನಡೆಸಿರುವ 10 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡಿದ್ದಾರೆ. 

ಖೇಣಿ ಮತದಾರರಿಗೆ ಹಣ ಹಂಚಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂಬ ಶಂಕೆಯಲ್ಲಿ  ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next