Advertisement

ಜೆಡಿಎಸ್‌ಗೆ ಮತ್ತೆ ಐಟಿ ಶಾಕ್‌ ; ಸಿಎಂ ಆಪ್ತನ ಮನೆ ಮೇಲೆ ದಾಳಿ

09:20 AM Apr 05, 2019 | Vishnu Das |

ಬೆಂಗಳೂರು: ರಾಜ್ಯದಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತನ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Advertisement

ಹೊಸಕೋಟೆ ತಾಲೂಕು ಜೆಡಿಎಸ್‌ ಅಧ್ಯಕ್ಷ ವಿ ಶ್ರೀಧರ್‌ ಅವರ ನಿವಾಸದ ಮೇಲೆ ಬುಧವಾರ 18 ಮಂದಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 5 ಗಂಟೆ ಯಿಂದ ಸಂಜೆ 5.30 ರ ವರೆಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next