Advertisement

ಸಚಿವ ಜಾರಕಿಹೊಳಿ,ಲಕ್ಷ್ಮಿ ಹೆಬ್ಬಾಳ್ಕರ್‌ ಮನೆಗಳ ಮೇಲೆ ಐಟಿ ದಾಳಿ 

10:48 AM Jan 19, 2017 | |

ಬೆಳಗಾವಿ: ಜಿಲ್ಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ  ದಾಳಿ ನಡೆಸಿ ಶಾಕ್‌ ನೀಡಿದ್ದಾರೆ. ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ  ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿವಾಸದ ಮೇಲೆ ಗುರುವಾರ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. 

Advertisement

ಜಾರಕಿಹೊಳಿ ಅವರ ಗೋಕಾಕ್‌ ನಿವಾಸ, ಅವರ ಸಹೋದರ ಲಖನ್‌ ಜಾರಕಿಹೊಳಿ ನಿವಾಸ ಬೆಂಬಲಿಗರಾದ ಜಾವೆದ್‌ ಮುಲ್ಲಾ  ನಿವಾಸ ಮತ್ತು ಲಕ್ಷ್ಮಿ ಅವರ ಕುವೆಂಪುನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದು ,ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 
 

Advertisement

Udayavani is now on Telegram. Click here to join our channel and stay updated with the latest news.

Next