Advertisement

ನಿವೃತ್ತ ಪೊಲೀಸ್‌ ಅಧಿಕಾರಿ ಮನೆ ಮೇಲೆ ಐಟಿ ದಾಳಿ

12:27 AM Apr 16, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ ಮುಖಂಡ, ನಿವೃತ್ತ ಪೊಲೀಸ್‌ ಅಧಿಕಾರಿ ಜಿ.ಎ.ಬಾವ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

Advertisement

ಆರ್‌.ಟಿ.ನಗರದಲ್ಲಿರುವ ಬಾವ ಅವರ ಮನೆ ಮೇಲೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ದಾಳಿ ನಡೆಸಿರುವ ಸುಮಾರು ಎಂಟು ಮಂದಿ ಐಟಿ ಅಧಿಕಾರಿಗಳ ತಂಡ ನಾಲ್ಕೈದು ಗಂಟೆಗಳ ಪರಿಶೀಲನೆ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಮತ್ತೂಂದೆಡೆ ರಾಜ್ಯದ ಸಚಿವರೊಬ್ಬರ ಇಬ್ಬರು ಆಪ್ತರ ಮನೆಗಳ ಮೇಲೂ ಐಟಿ ದಾಳಿ ನಡೆಸಿದೆ. ಫ್ರೆಜರ್‌ಟೌನ್‌ನ ಸೈಯದ್‌ ಮುಜಾಹಿದ್‌ ಮತ್ತು ಟ್ಯಾನರಿ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿ ಮಾಲೀಕ ರೋಹನ್‌ ಎಂಬುವರ ಮನೆಗಳ ಮೇಲೆ ದಾಲಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಖಚಿತ ಪಡಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next