Advertisement

ಜೆಡಿಎಸ್ ನಾಯಕರಿಗೆ ಶಾಕ್: ಪುಟ್ಟರಾಜು, ಫಾರೂಕ್ ಮನೆ ಮೇಲೆ ಐಟಿ ದಾಳಿ

09:09 AM Mar 29, 2019 | keerthan |

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು,  ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮನೆ ಸೇರಿದಂತೆ ರಾಜ್ಯದ ಹತ್ತಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Advertisement

ಗುರುವಾರ ಬೆಳಂಬೆಳಗ್ಗೆ ಐಟಿ ಅಧಿಕಾರಿಗಳು ಜೆಡಿಎಸ್ ನಾಯಕರ ಮನೆಗಳಿಗೆ ದಾಳಿ ನಡೆಸಿ ದಾಖಲೆಗಳಿಗಾಗಿ ತಪಾಸಣೆ ನಡೆಸುತ್ತಿದ್ದಾರೆ. ಸಚಿವ ಸಿ ಎಸ್ ಪುಟ್ಟರಾಜು ಅವರ ಮನೆ ಮೇಲೆ ದಾಳಿ ಮಾಡುವ ಸಂದರ್ಭ ಸಿಆರ್ ಪಿಎಫ್ ಭಧ್ರತೆಯೊಂದಿಗೆ ದಾಳಿ ಮಾಡಲಾಗಿದೆ.

ಹಾಸನದಲ್ಲಿ ಹತ್ತಕ್ಕೂ ಹೆಚ್ಚು ಜೆಡಿಎಸ್ ಮುಖಂಡರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಾಸನದಲ್ಲಿರುವ ಲೋಕೋಪಯೋಗಿ ಇಲಾಖೆಯ ಕಚೇರಿಯ ಮೇಲೂ ಐಟಿ ದಾಳಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next