Advertisement

BJP; ಬೆಳಗಾವಿಯಲ್ಲಿ ನಡೆದಿದ್ದು ಬಿಜೆಪಿಯ ಗೌಪ್ಯ ಸಭೆಯಲ್ಲ: ಅರವಿಂದ್ ಬೆಲ್ಲದ್

02:42 PM Aug 12, 2024 | Team Udayavani |

ಧಾರವಾಡ: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಸಿದ್ದೇಶ್ವರ ಅವರು ಗೌಪ್ಯವಾಗಿ ಸಭೆ ಮಾಡಿಲ್ಲ. ಬದಲಾಗಿ ಬಹಿರಂಗವಾಗಿಯೇ ಮಾಡಿದ್ದಾರೆ. ಅದೇನು ಗೌಪ್ಯ ಸಭೆಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವಿಚಾರದಲ್ಲಿ ಕೆಲವೊಂದಿಷ್ಟು ವಿಚಾರಗಳನ್ನು ಪಕ್ಷದೊಳಗೆ ಚರ್ಚೆ ಮಾಡಬೇಕಿದೆ. ಪಕ್ಷದೊಳಗೆ ಕುಳಿತು ಎಲ್ಲರೂ ಮಾತನಾಡುವ ಅವಶ್ಯಕತೆಯಿದೆ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ ಎಂದರು‌.

ಒಂದು ಪಕ್ಷ ಎಂದಾಗ ಬೇರೆ ಬೇರೆ ವಿಚಾರಗಳು ಇದ್ದೇ ಇರುತ್ತವೆ. ಅವರು ಹೇಳುವ ಕೆಲ ವಿಚಾರಗಳು ಸರಿ ಇವೆ. ಅವುಗಳ ಬಗ್ಗೆ ಪಕ್ಷದೊಳಗೆ ಚರ್ಚೆ ಆಗಬೇಕಿದೆ. ಈ ವಿಚಾರಗಳ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಎಲ್ಲವನ್ನೂ ಬಗೆಹರಿಸುವ ಪ್ರಯತ್ನ ಆಗುತ್ತದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಕಾಂಗ್ರೆಸ್‌ ನಲ್ಲೂ ಒಂದು ರೀತಿಯ ಅಸಮಾಧಾನ ಇದ್ದೇ ಇದೆ. ಒಂದೊಂದು ದಿನ ಒಬ್ಬೊಬ್ಬರು ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದು ಎಲ್ಲ ಪಕ್ಷಗಳಲ್ಲಿ ಇದ್ದದ್ದೆ ಎಂದರು.

ಈ ಹಿಂದೆ ಹಂಸರಾಜ್ ಭಾರದ್ವಾಜ್ ಅವರು ರಾಜ್ಯಪಾಲರಿದ್ದಾಗ ಯಡಿಯೂರಪ್ಪನವರು ಸಿಎಂ ಆಗಿದ್ದರು. ಆಗ ಭಾರದ್ವಾಜ್ ಅವರು ಸ್ಪಷ್ಟನೆ ಕೇಳದೆ ಕ್ರಮಕ್ಕೆ ಮುಂದಾಗಿದ್ದರು. ಆದರೆ, ಈಗಿನ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಸ್ಪಷ್ಟನೆಗೆ ಅವಕಾಶ ಕೊಟ್ಟಿದ್ದಾರೆ. ಅವರ ಸ್ಪಷ್ಟನೆ ಸಮರ್ಪಕವಾಗಿದ್ದರೆ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ, ಅಸಮರ್ಪಕ ಇದ್ದಾಗ ಮಾತ್ರ ಮುಂದಿನ ಕ್ರಮ ಆಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next