Advertisement

Congress ​ಪಾರ್ಟಿಯಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನುವ ಮಾತಿತ್ತು: ಶೆಟ್ಟರ್

06:19 PM Feb 25, 2024 | Team Udayavani |

ಹುಬ್ಬಳ್ಳಿ: ”ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದಷ್ಟೇ ಕಾಂಗ್ರೆಸ್​ಗೆ ಹೋಗಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್​ ಇತಿಹಾಸ ತೆಗೆದು ನೋಡಲಿ. ಏಕೆಂದರೆ, ಕಾಂಗ್ರೆಸ್​ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನುವ ಮಾತಿತ್ತು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕುಟುಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್,ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಒಂಬತ್ತು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿ, ಯಾರು ಬೇಕಾದರೂ ಬಂದು ಕಾಂಗ್ರೆಸ್ ಸೇರಿ ಅಂತಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳುತ್ತಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ. ಅಲ್ಲದೆ, ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರುತ್ತಿದ್ದಾರೆ.ಶಿವಕುಮಾರ್ ಭ್ರಮೆಯಲ್ಲಿದ್ದಾರೆ. ಇದು ಕಾಂಗ್ರೆಸ್​ನ ಕೊನೆಯ ಸರ್ಕಾರ. ಮುಂದೆ ಯಾವತ್ತೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಇನ್ನು ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಟಿಕೆಟ್ ಬೇಡಿಕೆ ಸೇರಿದಂತೆ ಇತರೆ ಗೊಂದಲಗಳ ವಿಚಾರ ಕೇವಲ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತೆ ಅಷ್ಟೇ. ಸದ್ಯದಲ್ಲೇ ಎಲ್ಲವೂ ಇತ್ಯರ್ಥವಾಗಲಿದೆ ಎಂದರು.

ಈ ಮಾಸಾಂತ್ಯದಲ್ಲಿ 100 ಸೀಟು ಘೋಷಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ ಅಷ್ಟೇ. ಅಲ್ಲಿಯವರೆಗೂ ಕಾದು ನೋಡಬೇಕು ಎಂದರು.

Advertisement

ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರ ವಿಜಯೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಸರ್ವ ಪಕ್ಷದಿಂದ ಸ್ಪಷ್ಟ ನಿರ್ಧಾರವಾದಾಗ ಮಾತ್ರ ಎಲ್ಲವೂ ಬಗೆ ಹರಿಯಲಿದೆ ಎಂದರು.

ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆಗೆ ಗೈರಾದ ಬಗ್ಗೆ ಸ್ಪಷ್ಟನೆ ನೀಡಿ, ನಾನು ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಅಂತಾ ಮೊದಲೇ ಹೇಳಿದ್ದೆ. ಇನ್ನೊಂದು ವಾರದಲ್ಲಿ ಎಲ್ಲ ಗೊಂದಲಗಳಿಗೂ ತೆರೆ ಬೀಳುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next