Advertisement

ಇಂತಹ ನಾಚಿಕೆಗೆಟ್ಟ ಸರ್ಕಾರ ಆದಷ್ಟು ಬೇಗ ಕೆಳಗೆ ಇಳಿದರೆ ಒಳ್ಳೆಯದು: ಆರಗ ಜ್ಞಾನೇಂದ್ರ

02:43 PM Jan 03, 2024 | Kavyashree |

ತೀರ್ಥಹಳ್ಳಿ : 1992 ರಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ  ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಎಂಬವರನ್ನು 30 ವರ್ಷಗಳ ನಂತರ ಬಂಧಿಸಿರುವುದು ನೋಡಿದರೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ. ಸರ್ಕಾರ ಪೊಲೀಸರನ್ನು ದುರುಪಯೋಗ ಮಾಡಿಕೊಂಡು ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಹಿಂದೂಗಳಿಗೆ ಹಿಂಸೆ ಕೊಡಬೇಕು, ಅಲ್ಪಸಂಖ್ಯಾತರ ಮತ ಬ್ಯಾಂಕ್ ಗಟ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಮಾಡಬಾರದನ್ನು ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮೌಲ್ವಿಗಳ ಸಭೆಯಲ್ಲಿ 10 ಸಾವಿರ ಕೋಟಿ ಅನೌನ್ಸ್ ಮಾಡಿದ್ದಾರೆ. ಪ್ರತಿಯೊಂದು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಕಾರ್ಯಗಳಿಗೆ ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದಾರೆ ಎಂದರು.

ಸರ್ಕಾರ ಹೊಸದಾಗಿ ಯಾವ ಕಾರ್ಯಕ್ರಮಗಳು ಮಾಡುತ್ತಿಲ್ಲ. ಎಲ್ಲವೂ ಅವರ ಗ್ಯಾರಂಟಿ ಯೋಜನೆಗೆ ಹೋಗುತ್ತಿದೆ. ಅವರ ವೋಟ್ ಬ್ಯಾಂಕ್ ಗಾಗಿ ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. ಇಂತಹ ನಾಚಿಕೆಗೆಟ್ಟ ಸರ್ಕಾರ ಆದಷ್ಟು ಬೇಗ ಕೆಳಗೆ ಇಳಿದರೆ ಒಳ್ಳೆಯದು. ಹೀಗೆ ಮುಂದುವರೆದರೆ ಸಿದ್ದರಾಮಯ್ಯನವರ ಸರ್ಕಾರವನ್ನು ತಿರಸ್ಕಾರ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next