Advertisement

ಸ್ವಯಂ ಉದ್ಯೋಗ ಕೈಗೊಳ್ಳಲು ಐಟಿಐ ಸಹಕಾರಿ: ಮುದ್ನಾಳ

02:17 PM Jun 21, 2022 | Team Udayavani |

ಯಾದಗಿರಿ: ವಿದ್ಯಾರ್ಥಿಗಳು ಐಟಿಐ ತರಬೇತಿ ಪಡೆದುಕೊಂಡು, ಸ್ವಯಂ ಉದ್ಯೋಗ ಮಾಡಬಹುದು ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement

ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕೆ ಸಂಸ್ಥೆಯಲ್ಲಿ ತರಬೇತಿ ಪಡೆದರೆ ಮುಂದೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಧ್ಯವಿದೆ. ಯಾವುದೇ ಕೆಲಸ ಮಾಡಿ ತಮ್ಮ ಜೀವನ ಸಾಗಿಸಬಹುದಾಗಿದ್ದು, ನಿರಂತರ ಶ್ರಮ ಅತ್ಯವಶ್ಯ. ಕೈಗಾರಿಕೆ ತರಬೇತಿ ಕೇಂದ್ರ ಯುವಕರಿಗೆ ಹೆಚ್ಚಿನ ಉಪಯುಕ್ತವಾಗಲಿದ್ದು, ಇದರ ಉಪಯೋಗವನ್ನು ಎಲ್ಲ ಯುವಕರು ಪಡೆದುಕೊಳ್ಳಬೇಕೆಂದರು.

ಯಾದಗಿರಿ ಜಿಲ್ಲೆಯು ಪಿಯು ಫಲಿತಾಂಶದಲ್ಲಿ ಈ ಹಿಂದೆ 31ನೇ ಸ್ಥಾನಕ್ಕೆ ಬರುತ್ತಿತ್ತು. ಆದರೆ ಈ ಬಾರಿ 23ನೇ ಸ್ಥಾನಕ್ಕೆ ಬಂದಿದೆ. ಇದು ಉತ್ತಮ ಸಾಧನೆ ಎಂದು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉಪನ್ಯಾಸಕರಾದ ಜಟ್ಟೆಪ್ಪ ಹದನೂರ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ್‌ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಭೀಮಾಶಂಕರ್‌ ಸೇರಿದಂತೆ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next