ಹುಬ್ಬಳ್ಳಿ: ಜನ ಸಂಕಲ್ಪ ಯಾತ್ರೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಮುಂಬಯಿ ಕರ್ನಾಟಕ, ಹೈದ್ರಾಬಾದ್ ಕರ್ನಾಟದಲ್ಲಿ ಯಶಸ್ವಿಯಾಗಿದೆ. ಚುನಾವಣೆ ವರ್ಷ ಹೀಗಾಗಿ ಜನರ ಬಳಿ ಹೋಗುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಚುನಾವಣೆಯಂತೆ ಜನರ ಬಳಿ ಹೋಗುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ ಎಂದರು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಆಪರೇಶನ್ ಕಮಲ: ಸಾಗರ-ಶಿವಮೊಗ್ಗದ ಪ್ರಮುಖರು ಪಕ್ಷ ಸೇರ್ಪಡೆ
ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆ ಬರಹ ವಿಚಾರವಾಗಿ ಸ್ಥಳೀಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.