ಶಿಡ್ಲಘಟ್ಟ: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವುದು ನೆಮ್ಮಲ್ಲರ ಪುಣ್ಯ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಜನರನ್ನು ಕೋವಿಡ್ ಸಂಕಷ್ಟದಿಂದ ದೇವರೇ ಕಾಪಾಡಬೇಕಿತ್ತು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಲೇವಡಿ ಮಾಡಿದರು. ತಾಲೂಕಿನ ಹಂಡಿಗನಾಳ ಗ್ರಾಮದ ಸಮೀಪ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆತ್ಮಾವಲೋಕನ ಮಾಡಿಕೊಳ್ಳಲಿ: ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವರು ಉತ್ತರಿಸಿದ್ದಾರೆ. ಭ್ರಷ್ಟಾಚಾರ ಮಾಡಿ ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಯಾರು ತಿಹಾರ್ ಜೈಲಿಗೆ ಹೋಗಿ ಬಂದಿದ್ದರು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ತಜ್ಞರ ಸಲಹೆಯಂತೆ ಲಾಕ್‌ಡೌನ್ ತೆರವುಗೊಳಿಸಲಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಜನರಿಗೆ ಪಡಿತರ ಹಂಚಿಕೆ ಮಾಡಿದೆ ಎಂದರು.
ರಾಜ್ಯದಲ್ಲಿ 1.5 ಕೋಟಿ ಜನರಿಗೆ ಆಹಾರ ಸಾಮಗ್ರಿ, 60 ಲಕ್ಷ ಕುಟುಂಬಗಳಿಗೆ ದಿನಸಿ ಮತ್ತು ಒಂದೂವರೆ ಲಕ್ಷ ಜನಕ್ಕೆ ಔಷಧಿ ಕಿಟ್‌ಗಳನ್ನು ಪಕ್ಷದ ಶಾಸಕರು, ಜಿಲ್ಲಾಧ್ಯಕ್ಷರು,
ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಂಚಿಕೆ ಮಾಡಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಮಾಜಿ ಅಧ್ಯಕ್ಷ ಡಾ.ಮಂಜುನಾಥ್, ಶಿಡ್ಲಘಟ್ಟ ಗ್ರಾಮಾಂತರ
ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಹ ವಕ್ತಾರ ರಮೇಶ್ ಬಾಯಿರಿ, ನಂದೀಶ್ ಹಾಗೂ ಜಿಲ್ಲಾ ಪದಾಧಿಕಾರಿಗಳು
ಉಪಸ್ಥಿತರಿದ್ದರು.
Related Articles
ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಲು ಬೂತ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ
ಪ್ರವಾಸ ಕೈಗೊಳ್ಳಲು ನಿರ್ಧರಿಸಿ ಈಗಾಗಲೇ ಮೈಸೂರು ಭಾಗದಲ್ಲಿ ಪ್ರವಾಸ ಮುಗಿಸಿ ಕೋಲಾರ ಜಿಲ್ಲಾ ಭಾಗದಲ್ಲಿ ಪ್ರವಾಸ ಕೈಗೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿದ್ದೇನೆ.
ನಳಿನ್‌ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಅಧ್ಯಕ್ಷ