Advertisement

ಕೇಂದ್ರದಿಂದ ಹಣ ಬಂದಿಲ್ಲ ಅಂತ ಕೈಕಟ್ಟಿ ಕುಳಿತಿಲ್ಲ: ಸಿಎಂ

03:45 AM Jan 01, 2017 | |

ಬೆಂಗಳೂರು: ಕೇಂದ್ರದಿಂದ ಹಣ ಬಂದಿಲ್ಲ ಎಂದು ನಾವೇನು ಕೈಕಟ್ಟಿ ಕುಳಿತಿಲ್ಲ. ಬರ ಪರಿಹಾರ ಕಾಮಗಾರಿಗಳಿಗಾಗಿ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಸಂಬಂಧ 862 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕಾಗಿ ಕೇಂದ್ರದಿಂದ ಹಣ ಬಂದಿಲ್ಲ ಎಂದು ಕೈಕಟ್ಟಿ ಕುಳಿತಿಲ್ಲ. ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು 400 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಈಗಾಗಲೇ 325 ಕೋಟಿ ರೂ. ಇದೆ. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. 

ಬರ ನಷ್ಟ ಪರಿಹಾರವಾಗಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ನಿಯಮ ಅನ್ವಯ 4,702 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಗೃಹ ಸಚಿವರ ಅಧ್ಯಕ್ಷತೆಯ ಸಮಿತಿ ಜನವರಿ 4ರಂದು ಸಭೆ ಸೇರಲಿದ್ದು, ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಪ್ರಧಾನಿಯವರು ಭರವಸೆ ನೀಡಿ¨ªಾರೆ ಎಂದು ಹೇಳಿದರು. 

ಪರಿಹಾರ ಒದಗಿಸುವ ವಿಚಾರದಲ್ಲಿ ಈಗಾಗಲೇ ವಿಳಂಬವಾಗಿದೆ. ಕೋರಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಜತೆಗೆ ಪ್ರವಾಹದಿಂದಾಗಿ ಕೆಲ ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದ್ದು, ಅದಕ್ಕೂ ನಿಯಮ ಪ್ರಕಾರ 386 ಕೋಟಿ ರೂ. ಪರಿಹಾರ ನೀಡುವಂತೆ ಕೇಳಿಕೊಂಡಿದ್ದೇವೆ. ಇದೆಲ್ಲದರ ಜತೆಗೆ ರಾಜ್ಯ ಸರ್ಕಾರ ಕೂಡ ತ್ವರಿತ ಪರಿಹಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದರು. 

ಈ ಬಾರಿ ಹಿಂಗಾರು ಮಳೆಯೂ ಕೈ ಕೊಟ್ಟಿದೆ. ಶೇ. 80ರಷ್ಟು ಮಳೆ ಕೊರತೆ ಉಂಟಾಗಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದೂ ತಿಳಿಸಿದರು. 

Advertisement

ಉದ್ಯೋಗ ಖಾತ್ರಿ ಯೋಜನೆಯಲ್ಲಿ ರಾಜ್ಯದಲ್ಲಿ 6.7 ಕೋಟಿ ಮಾನವ ದಿನಗಳು ಸೃಷ್ಟಿಯಾಗಿವೆ. ಅದನ್ನು ಈಗ ಹತ್ತು ಕೋಟಿಗೆ ಹೆಚ್ಚಿಸಲಾಗಿದೆ. ಇದಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ರಾಜ್ಯಕ್ಕೆ 3,985 ಕೋಟಿ ರೂ.ಗಳ ಅನುದಾನ ಬರಬೇಕಿದೆ. ಈವರೆಗೆ 1,660 ಕೋಟಿ ಕೊಡಲಾಗಿದೆ. ಎರಡನೇ ಕಂತಿನಲ್ಲಿ 2,856 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಆದರೆ, 250 ಕೋಟಿ ರೂ. ಕೊಟ್ಟಿ¨ªಾರೆ. ಇದಲ್ಲದೆ 250 ಕೋಟಿ ರೂ.ಗಳ ಕಟ್ಟಡ ಸಾಮಗ್ರಿ ವೆಚ್ಚವೂ ಈವರೆಗೆ ಬಂದಿಲ್ಲ. ಇದರಿಂದ ಹಲವಡೆ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next