Advertisement

ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಂತ ಅವಶ್ಯಕ: ಸಚಿವ ರಮೇಶ್ ಜಾರಕಿಹೊಳಿ

04:13 PM Dec 04, 2020 | keerthan |

ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರಲ್ಲಿ ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

Advertisement

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಮಾತನಾಡಿದ ಅವರು ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಯನ್ನಾಗಿ ಮಾಡಲು ನಿರ್ಧರಿಸಿದ್ದರು. ಆದರೆ ತಾಂತ್ರಿಕ ಕಾರಣದಿಂದ ಕೈಬಿಡಲಾಯಿತು ಎಂದರು.

ಇದನ್ನೂ ಓದಿ:ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಸೂಚನೆ: 198 ವಾರ್ಡ್ ಗಳಿಗೆ ನಡೆಯಲಿದೆ ಚುನಾವಣೆ

ಚಿಕ್ಕೋಡಿ ಮತ್ತು ಗೋಕಾಕ ಪ್ರತ್ಯೆಕ ಜಿಲ್ಲೆಯ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಲಾಗುವದು. ಚಿಕ್ಕೋಡಿ ಮತ್ತು ಗೋಕಾಕ ತಾಲೂಕಿನಲ್ಲಿ ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕನ್ನು ಸಲೀಸಾಗಿ ಜಿಲ್ಲೆ ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟ ಪಡಿಸಿದರು.

ಈ ಸಂದರ್ಭದಲ್ಲಿ ಬಿ.ಆರ್. ಸಂಗಪ್ಪಗೋಳ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next