Advertisement

ನಾನು ಕೊಲಂಬೋಗೆ ಹೋಗಿದ್ದು ಹೌದು, ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ: ಎಚ್ ಡಿಕೆ

03:47 PM Sep 12, 2020 | keerthan |

ಬೆಂಗಳೂರು: ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಎಚ್ ಡಿ ಕುಮಾರಸ್ವಾ,ಮಿ ಮತ್ತು 26 ಜೆಡಿಎಸ್ ಶಾಸಕರೊಂದಿಗೆ ನಾನು ಕೊಲಂಬೋ ಕ್ಯಾಸಿನೋಗೆ ತೆರಳಿದ್ದೆ ಎಂಬ ಜಮೀರ್ ಅಹಮದ್ ಖಾನ್ ಮಾತಿಗೆ ಎಚ್ ಡಿಕೆ ಟ್ವೀಟ್ ಮುಖಾಂತರ ತಮ್ಮ ಸ್ಪಷ್ಟೀಕರಣ ನೀಡಿದರು.

ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ. 2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆಗೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆಯಲ್ಲಿ ರಾಜ್ಯದ 32 ರಾಜಕಾರಣಿಗಳು ಶಾಮೀಲು: ಪ್ರಮೋದ್ ಮುತಾಲಿಕ್ ಸ್ಪೋಟಕ ಮಾಹಿತಿ

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸ್ಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದರು.

Advertisement

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಎಚ್ ಡಿಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next