Advertisement

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

12:47 AM Dec 19, 2024 | Team Udayavani |

ಬೆಂಗಳೂರು: ಒಕ್ಕಲುಗಳಿಗೆ ಮಾಲಕತ್ವ ನೀಡುವ ಕಾಯ್ದೆ ಜಾರಿಯಾಗಿ 12 ವರ್ಷ ಕಳೆದರೂ ಒಕ್ಕಲುಗಳಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ವಿಶೇಷ ಅಭಿಯೋಜಕರನ್ನು ನೇಮಕ ಮಾಡಿ ಕೂಡಲೇ ಮೂಲಗೇಣಿದಾರರು ಸಲ್ಲಿಸಿರುವ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ಸೂಕ್ತ ಕ್ರಮ ಕೈಗೊಂಡು ಅವರಿಗೆ ಭೂಮಿ ಹಕ್ಕನ್ನು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರು ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ತಿನ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಕಂದಾಯ ಸಚಿವರ ಗಮನ ಸೆಳೆದರು.

Advertisement

ಮೂಲಗೇಣಿ ಪದ್ಧತಿ ರದ್ಧತಿಗೆ 2012ರ ಜು. 13ರಂದು ರಾಷ್ಟ್ರಪತಿ ಅಂಕಿತ ದೊರಕಿತ್ತು. ಇದುವರೆಗೂ ತಾಲೂಕು ಕಚೇರಿಯಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಅರ್ಜಿ ಇತ್ಯರ್ಥಗೊಳಿಸಲು ವಿಶೇಷ ಅಭಿಯೋಜಕರನ್ನು ನೇಮಕ ಮಾಡಬೇಕು. 2016ರಲ್ಲಿ ಎಲ್ಲವೂ ಸರಿಯಾಗುತ್ತದೆ ಎನ್ನು ವಾಗಲೇ ಇದರ ವಿರುದ್ಧ ಮೂಲಿದಾರರು ಹೈಕೋ ರ್ಟ್‌ ಮೆಟ್ಟಿಲೇರಿದರು. ಅನಂತರ ಒಕ್ಕಲುಗಳಿಗೆ ನ್ಯಾಯ ಒದಗಿಸಲು ಸರಕಾರ ಮುಂದಾಗಲಿಲ್ಲ. ಕರ್ನಾಟಕ ಹೈಕೋರ್ಟ್‌ ನ್ಯಾಯಾ ಲಯದಲ್ಲಿ ಮೂಲಗೇಣಿ ಪರ ತೀರ್ಪು
ಬಂದಿದೆ. ಮೂಲಿದಾರರು ಮೇಲ್ಮನವಿ ಸಲ್ಲಿಸುವ ಮೂಲಕ ಮೂಲಗೇಣಿ ದಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೊಲೀಸರನ್ನು ಬಳಸಿಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next