Advertisement

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಐವನ್‌  ಪ್ರಮಾಣ ವಚನ

12:30 AM Jan 18, 2019 | Team Udayavani |

ಮಂಗಳೂರು:  ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರು ಗುರುವಾರ ಬೆಳಗ್ಗೆ  10.30ಕ್ಕೆ  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಮ್ಮುಖ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಈ ಸಂದರ್ಭ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಪ್ರವಾಸೋಧ್ಯಮ ಸಚಿವ ಸಾ.ರಾ. ಮಹೇಶ್‌, ರಾಜ್ಯ ಸರಕಾರದ ಕಾರ್ಯದರ್ಶಿ ವಿಜಯ ಭಾಸ್ಕರ್‌ ರಾವ್‌ ಹಾಗೂ ಮಂಗಳೂರಿನ 150 ಮಂದಿ ಐವನ್‌ ಅವರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next