Advertisement

Jammu- Kashmir: ಎರಡು ಪ್ರತ್ಯೇಕ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ

09:27 AM May 06, 2023 | Team Udayavani |

ಶ್ರೀನಗರ: ಜಮ್ಮು -ಕಾಶ್ಮೀರದ ರಾಜೌರಿ ಮತ್ತು ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಎರಡು ಪ್ರತ್ಯೇಕ ಎನ್‌ಕೌಂಟರ್‌ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಮಾಧ್ಯಮದ ವರದಿ ಶನಿವಾರ ತಿಳಿಸಿದೆ.

Advertisement

ಬಾರಾಮುಲ್ಲಾ ಪ್ರದೇಶದಲ್ಲಿಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದ್ದರು. ಆ ವೇಳೆಗೆ ಉಗ್ರರು ಫೈರಿಂಗ್ ಆರಂಭಿಸಿದ್ದರಿಂದ , ಓರ್ವನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಹಲವು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿಯೂ ಭಾರತೀಯ ಸೇನಾಪಡೆಗಳು ಎನ್‌ಕೌಂಟರ್‌ ಆರಂಭಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next