Advertisement

ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ

02:27 PM Aug 05, 2021 | Team Udayavani |

ಮೈಸೂರು: ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ನಡೆಯುವುದು ಸಹಜ. ದಾಳಿಯೆ ತಪ್ಪು ಎಂದರೇ ಹೇಗೆ? ಸ್ವಾಯತ್ತ ಸಂಸ್ಥೆಗಳು ಅವರ ಕೆಲಸ ಅವರು ಮಾಡಬಾರದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶ್ನಿಸಿದರು.

Advertisement

ಮೈಸೂರಿನ ಸುತ್ತೂರು ಮಠದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಮನೆ ಮೇಲೆ ಇಡಿ ದಾಳಿ ನಡೆಸಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಇದು ರಾಜಕೀಯ ಪ್ರೇರಿತ ದಾಳಿಯಲ್ಲ. ಲೆಕ್ಕದ ಅನುಮಾನ ಇದ್ದಾಗ ಪರಿಶೀಲನೆಗೆ ಬಂದಿರುತ್ತಾರೆ. ಜಮೀರ್ ಲೆಕ್ಕ ಪತ್ರ ಸರಿ ಇಟ್ಟು ಕೊಂಡಿದ್ದರೆ ಅದನ್ನು ತೋರಿಸುತ್ತಾರೆ ಅಷ್ಟೇ. ಇದಕ್ಕೆ ಬೇರೆ ರೀತಿಯ ಬಣ್ಣ ಬೇಡ ಎಂದರು.

ಜಮೀರ್ ಗೆ ಬೇಕಾದಷ್ಟು ವ್ಯವಹಾರ ಇದೆ. ಅವರು ಬ್ಯುಸಿನೆಸ್ ಕ್ಲಾಸ್ ಜನ. ಅವರೇನೂ ನನ್ನ ರೀತಿ ಹಳ್ಳಿಯಲ್ಲಿ ಇರುವ ಶಾಸಕರಲ್ಲ. ಐಟಿ, ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ ಎಂದರು.

ಇದನ್ನೂ ಓದಿ:ಜಮೀರ್ ಮನೆ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ ಆರೋಪ

Advertisement

ಇಡಿ ದಾಳಿ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಧುಸ್ವಾಮಿ, ಸಿದ್ದರಾಮಯ್ಯನಂತವರು ಈ ರೀತಿ ಹೇಳುವುದು ತಪ್ಪು. ಕಾಂಗ್ರೆಸ್ ನವರು ಅವರ ಆಡಳಿತ ಕಾಲದಲ್ಲಿ ಐಟಿ- ಇಡಿ ಗಳನ್ನು ದುರುಪಯೋಗ ಪಡಿಸಿಕೊಂಡಿರಬಹುದು. ಇವತ್ತೂ ಅದೇ ಆಗುತ್ತಿದೆ ಎಂದು ಅವರು ಅಂದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next