Advertisement

ಗಣಿಬಾಧಿತ ಪ್ರದೇಶ ಅಭಿವೃದ್ಧಿ: ಸುಪ್ರೀಂಕೋರ್ಟ್‌ ಆದೇಶದಂತೆ ಕ್ರಮ; ಜೆ.ಸಿ. ಮಾಧುಸ್ವಾಮಿ

10:14 PM Mar 18, 2022 | Team Udayavani |

ಬೆಂಗಳೂರು: ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಣಿ ಭಾದಿತ ಪ್ರದೇಶಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆ ಅನುಷ್ಟಾನಕ್ಕೆ ಹಣ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶ ನಿರೀಕ್ಷಿಸಲಾಗುತ್ತಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸೋಮಶೇಖರ ರೆಡ್ಡಿ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಸರ ಯೋಜನೆಯ ಅನುಮೋದನೆ ಹಾಗೂ ಯೋಜನೆಯ ಅನುಷ್ಠಾನಕ್ಕೆ ಹಣ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಕಾಯಲಾಗುತ್ತಿದೆ ಎಂದು ಹೇಳಿದರು.

ಈ ಯೋಜನೆ ಅನುಷ್ಠಾನಕ್ಕೆ ಮೀಸಲಾದ 19,477 ಕೋಟಿ ರೂ. ಹಣ ಕೂಡ ನಿರ್ವಹಣ ಸಮಿತಿಯಲ್ಲಿದ್ದು, ಅದು ಕೂಡ ಸುಪ್ರೀಂ ಕೋರ್ಟ್‌ ಮುಂದಿದೆ. ಅರ್ಜಿ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರುವ ನಿರೀಕ್ಷೆ ಇದೆ. ಸುಪ್ರೀಂ ಕೋರ್ಟ್‌ ಆದೇಶ ಬಂದ ಕೂಡಲೇ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆ ಅನುಷ್ಠಾನಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next