ಕಾಶ್ಮೀರ:ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಾಜಿರ್ಪೋರಾ ಕಚ್ಡೋರಾ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ(ಜೂನ್ 25) ನಡೆದಿದೆ.
ಇದನ್ನೂ ಓದಿ:ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ
ಘಟನೆ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭದ್ರತಾ ಪಡೆಯ ಎನ್ ಕೌಂಟರ್ ಗೆ ಉಗ್ರನೊಬ್ಬ ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಪಡೆದ ನಂತರ ಪೊಲೀಸರು, ಸೇನೆ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಅಡಗಿದ್ದಾರೆಂಬ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದಾಗ, ಇದಕ್ಕೆ ಪ್ರತಿದಾಳಿ ನಡೆಸಿದ ಪರಿಣಾಮ ಉಗ್ರನೊಬ್ಬ ಸಾವನ್ನಪ್ಪಿದ್ದು, ಎಷ್ಟು ಮಂದಿ ಉಗ್ರರು ಅಡಗಿದ್ದಾರೆಂಬುದು ಕಾರ್ಯಾಚರಣೆ ಅಂತ್ಯಗೊಂಡ ನಂತರವಷ್ಟೇ ತಿಳಿದುಬರಬೇಕಾಗಿದೆ ಎಂದು ವರದಿ ತಿಳಿಸಿದೆ.